ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೌಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ಕಾಲೋನಿ ಸಮೀಪ, ರಾಧಾಸ್ವಾಮಿ ಆಶ್ರಮದ ಮುಂಭಾಗದಲ್ಲಿರುವ ಟಿ.ಎನ್.ಕೋಟೆ ರಸ್ತೆಯ ಶಿಥಿಲಾವಸ್ಥೆಯಲ್ಲಿರುವ ಸೇತುವೆಯನ್ನು ಸಂಪೂರ್ಣವಾಗಿ ತೆರವುಗೊಳಿಸದೆ,
ಹಳೆಯ ಸೇತುವೆಯ ಮೇಲೆಯೇ ಕೇವಲ ಪಿಲ್ಲರ್‌ಗಳನ್ನು ಅಳವಡಿಸಿ ಕಾಮಗಾರಿ ನಡೆಸಲು ಮುಂದಾಗಿರುವುದು ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಅಪಾಯಕಾರಿಯಾಗಿ ಬಿರುಕು ಬಿಟ್ಟಿರುವ ಈ ಸೇತುವೆ ದಿನನಿತ್ಯ ಶಾಲಾ ಮಕ್ಕಳು, ವೃದ್ಧರು ಹಾಗೂ ವಾಹನ ಸಂಚಾರಕ್ಕೆ ಜೀವಭೀತಿಯ ಕೇಂದ್ರವಾಗಿದ್ದು, ಇಂತಹ ಸ್ಥಿತಿಯಲ್ಲಿ ವೈಜ್ಞಾನಿಕ ವಿಧಾನದಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಬೇಕಾದ ಅಧಿಕಾರಿಗಳು ಕಣ್ಣುಗುಟ್ಟಿಕೊಂಡು, ತಾತ್ಕಾಲಿಕ ಮತ್ತು ಅಸುರಕ್ಷಿತ ಕಾಮಗಾರಿಗೆ ಮುಂದಾಗಿದ್ದಾರೆ ಎನ್ನುವುದು ಸಾರ್ವಜನಿಕರ ಆರೋಪ.
ಕಳಪೆ ಕಾಮಗಾರಿಯಿಂದ ಭವಿಷ್ಯದಲ್ಲಿ ದೊಡ್ಡ ಅನಾಹುತ ಸಂಭವಿಸಿದರೆ ಅದರ ಹೊಣೆ ಯಾರು ಹೊರುವರು ಎಂಬ ಪ್ರಶ್ನೆ ಉದ್ಭವಿಸಿದ್ದು, ಕೂಡಲೇ ಶಿಥಿಲ ಸೇತುವೆಯನ್ನು ಸಂಪೂರ್ಣವಾಗಿ ತೆರವುಗೊಳಿಸಿ ಗುಣಮಟ್ಟದ ಹೊಸ ಸೇತುವೆ ನಿರ್ಮಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಸಂಬಂಧಿತ ಇಲಾಖೆ ಮತ್ತು ಜನಪ್ರತಿನಿಧಿಗಳ ವಿರುದ್ಧ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ
PublicNext
01/02/2026 06:41 pm
LOADING...