ಚಳ್ಳಕೆರೆ: ಮಡಿವಾಳ ಸಮುದಾಯವು ಕಾಯಕ ನಿಷ್ಠೆ ತೋರುವ ಸಮಾಜವಾಗಿದ್ದು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದಾಗ ಮಾತ್ರ ಮಡಿವಾಳ ಸಮಾಜವು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಶಾಸಕ ಟಿ ರಘುಮೂರ್ತಿ ಅಭಿಪ್ರಾಯ ಪಟ್ಟರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರ ಜೊತೆ ಸೇರಿ ಅನುಭವ ಮಂಟಪದಲ್ಲಿ ಮಹಿಳೆಯರ ಏಳಿಗೆಗಾಗಿ ಹಾಗೂ ವಚನ ಸಾಹಿತ್ಯ ಸೇರಿದಂತೆ ಹಲವು ಮಹತ್ವದ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಸಾರಿದಂತಹ ಮಹಾನ್ ಮಾನವತಾವಾದಿಯಾಗಿದ್ದರು ಮಡಿವಾಳ ಸಮುದಾಯವು ತಾನು ಮೈಲಿಗೆಯಾಗಿ ಬೇರೆಯವರ ಮನಸ್ಸು ಮತ್ತು ವಸ್ತ್ರವನ್ನು ಶುಭ್ರಗೊಳಿಸುವ ಕಾಯಕದಲ್ಲಿ ತೊಡಗಿದ್ದಾರೆ.
ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮಡಿವಾಳ ಸಮಾಜವು ಪ್ರಗತಿ ಸಾಧಿಸಬೇಕಿದೆ ಎಂದು ತಿಳಿಸಿದರು.
ನಗರದ ಬಳ್ಳಾರಿ ರಸ್ತೆಯಲ್ಲಿರುವ ಮಡಿವಾಳರ ವಿದ್ಯಾರ್ಥಿ ನಿಲಯ ಹಾಳಾಗಿರುವ ಬಗ್ಗೆ ಮುಖಂಡ ಎಂ ಎನ್ ಮೃತ್ಯುಂಜಯ ಶಾಸಕರ ಗಮನ ಸೆಳೆದಾಗ ವಿದ್ಯಾರ್ಥಿ ನಿಲಯದ ಬಗ್ಗೆ ಮುಖಂಡರಿಂದ ಮಾಹಿತಿ ಪಡೆದುಕೊಂಡು ವಿದ್ಯಾರ್ಥಿ ನಿಲಯ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದರು.
Kshetra Samachara
01/02/2026 07:19 pm
LOADING...