ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಳಸ: ದಕ್ಷಿಣ ಕಾಶಿಯಲ್ಲಿ ವೈಭವದ ರಥೋತ್ಸವ - ಕಳಶೇಶ್ವರನ ದರ್ಶನಕ್ಕೆ ಹರಿದುಬಂದ ಭಕ್ತ ಸಾಗರ

ಕಳಸ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಕಳಸದ ಇತಿಹಾಸ ಪ್ರಸಿದ್ಧ ಶ್ರೀಕಳಶೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವು ಭಕ್ತ ಸಾಗರದ ನಡುವೆ ಅತ್ಯಂತ ವಿಜೃಂಭಣೆಯಿಂದ ಜರುಗಿತು.

ಕಳೆದ 8 ದಿನಗಳಿಂದ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಹಾಗೂ ಸಾಂಪ್ರದಾಯಿಕ ಪೂಜಾ ಕಾರ್ಯಕ್ರಮಗಳು ನಿರಂತರವಾಗಿ ನಡೆದುಕೊಂಡು ಬಂದಿದ್ದವು. ಈ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು.

ರಥೋತ್ಸವದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ ಹಾಗೂ ನೈವೇದ್ಯಗಳನ್ನು ಅರ್ಪಿಸಿದ ನಂತರ, ಕಳಶೇಶ್ವರನ ಉತ್ಸವ ಮೂರ್ತಿಯನ್ನು ಮಂಗಲವಾದ್ಯಗಳೊಂದಿಗೆ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಮಾಡಿಸಲಾಯಿತು.

ನಂತರ ನಡೆದ ರಥೋತ್ಸವದ ವೇಳೆ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ಚಿಕ್ಕಮಗಳೂರು ಜಿಲ್ಲೆ ಹಾಗೂ ಕಳಸ ತಾಲೂಕಿನ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ಐದು ಸಾವಿರಕ್ಕೂ ಹೆಚ್ಚು ಭಕ್ತರು, ತಾವು ಶ್ರಮಪಟ್ಟು ಬೆಳೆದ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಹಾಗೂ ಬಾಳೆ ಸೇರಿದಂತೆ ವಿವಿಧ ಕೃಷಿ ಫಸಲುಗಳನ್ನು ರಥಕ್ಕೆ ಅರ್ಪಿಸಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು. ಕಳಶೇಶ್ವರನ ನಾಮಸ್ಮರಣೆ ಮಾಡುತ್ತಾ ರಥದ ಹಗ್ಗ ಎಳೆದ ಭಕ್ತರು ಪುನೀತರಾದರು.

Edited By : Manjunath H D
PublicNext

PublicNext

01/02/2026 08:50 pm

Cinque Terre

13.53 K

Cinque Terre

0

ಸಂಬಂಧಿತ ಸುದ್ದಿ