ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಅಯ್ಯೋ ವಿಧಿ! ಮಣ್ಣು ಕುಸಿದು 27ರ ಯುವ ಚಾಲಕನ ದಾರುಣ ಸಾವು

ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕದನೂರಿನಲ್ಲಿ ನಡೆದ ದುರ್ಘಟನೆಯೊಂದರಲ್ಲಿ, ಮಣ್ಣು ಕುಸಿದು ಟಿಪ್ಪರ್ ಚಾಲಕರೊಬ್ಬರು ಸಾವನ್ನಪ್ಪಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಮನ ಘಂಟಿ ನಿವಾಸಿ, 27 ವರ್ಷದ ಸಂಗಮೇಶ ಮೃತ ಚಾಲಕ. ಟಿಪ್ಪರ್‌ನಲ್ಲಿದ್ದ ಹರೀಶ್ ಎಂಬ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕದನೂರಿನ ಕೋಟೆರ ನವೀನ್ ಎಂಬುವವರ ಜಾಗದಲ್ಲಿ ಮಣ್ಣು ಅಗೆಯುವ ಕಾರ್ಯ ನಡೆಯುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಅವೈಜ್ಞಾನಿಕ ರೀತಿಯಲ್ಲಿ ಮಣ್ಣು ತೆಗೆಯುತ್ತಿದ್ದದ್ದೇ ಈ ಭೀಕರ ಅವಘಡಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಮೃತ ಸಂಗಮೇಶ ಅವರ ಮೃತದೇಹವನ್ನು ವಿರಾಜಪೇಟೆ ಆಸ್ಪತ್ರೆಗೆ ರವಾನಿಸಲಾಗಿದ್ದು, ವಿರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Shivu K
PublicNext

PublicNext

01/02/2026 09:08 pm

Cinque Terre

14.64 K

Cinque Terre

0

ಸಂಬಂಧಿತ ಸುದ್ದಿ