ಹಾವೇರಿ: ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಆಶಾದಾಯಕವಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್‌ನ ಪ್ರಮುಖಾಂಶಗಳನ್ನು ವಿವರಿಸಿದರು.
ವಿದೇಶಗಳಿಗೆ ಪ್ರಯಾಣಿಸುವ ಭಾರತೀಯರ ಮೇಲಿನ ತೆರಿಗೆಯನ್ನು ಶೇ. 2ರಷ್ಟು ಕಡಿಮೆ ಮಾಡಲಾಗಿದೆ. ಅಲ್ಲದೆ, ತೆರಿಗೆ ಪಾವತಿಸಲು ಮಾರ್ಚ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪಾಟೀಲ್ ತಿಳಿಸಿದರು.
ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ನಡುವೆ ಹೈಸ್ಪೀಡ್ ಕಾರಿಡಾರ್‌ಗಳನ್ನು ಘೋಷಿಸಿರುವುದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.
ಸಿಗರೇಟ್ ಮತ್ತು ಔಷಧಿಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲಾಗಿದೆ. ಇದು ಬಡವರಪರ, ಮಧ್ಯಮವರ್ಗದವರ ಪರವಾದ, ಉತ್ತಮವಾದ ಮತ್ತು ಆಶಾದಾಯಕ ಬಜೆಟ್ ಆಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಬಣ್ಣಿಸಿದರು.
ಇದೇ ವೇಳೆ, ರಾಯ್ ಆತ್ಮಹತ್ಯೆ ಪ್ರಕರಣದ ಕುರಿತು ಪ್ರಸ್ತಾಪಿಸಿದ ಅವರು, ಈ ಬಗ್ಗೆ ಸೂಕ್ತ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕು ಎಂದು ಆಗ್ರಹಿಸಿದರು.
PublicNext
01/02/2026 09:54 pm
LOADING...