ಬಳ್ಳಾರಿ : ಬಳ್ಳಾರಿಯ ಆರಾಧ್ಯದೈವ ಕೋಟೆ ಮಲ್ಲೇಶ್ವರ ಜಾತ್ರಾ ಮಹೋತ್ಸವ ಭಾನುವಾರ ಸಂಜೆ ಅದ್ದೂರಿಯಾಗಿ ನಡೆಯಿತು. ಬಳ್ಳಾರಿ ನಗರ, ಜಿಲ್ಲೆಯಲ್ಲದೆ, ಹೊರ ಜಿಲ್ಲೆಗಳಿಂದಲೂ ಬಂದಿದ್ದ ಸಾವಿರಾರು ಭಕ್ತರು ತಮ್ಮ ಆರಾಧ್ಯ ದೈವನಿಗೆ ಭಕ್ತಿ ಸಮರ್ಪಿಸಿ ಧನ್ಯತಾ ಭಾವ ಮೆರೆದರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಹಲವು ಕಾಂಗ್ರೆಸ್ ಮುಖಂಡರು ಜಾತ್ರೆ ಮಹೋತ್ಸವದಲ್ಲಿ ಗಮನ ಸೆಳೆದರು.
ಡೊಳ್ಳು ಕುಣಿತ, ಗೊರವರ ಕುಣಿತ, ಗೊಂಬೆ ಕುಣಿತ, ಮಂಗಳ ವಾದ್ಯದ ತಂಡ ಹಾಗೂ ವಿವಿಧ ಕಲಾ ಪ್ರಕಾರಗಳನ್ನು ಪ್ರದರ್ಶಿಸುವ ಮೂಲಕ ಕಲಾವಿದರು ರಥೋತ್ಸವಕ್ಕೆ ಮೆರುಗು ತಂದರು.
ಮಕ್ಕಳು, ಮಹಿಳೆಯರು ಹಾಗೂ ಪುರುಷರೂ ಸೇರಿದಂತೆ ಎಲ್ಲ ವಯೋಮಾನದ ಜನರು ರಥೋತ್ಸವದಲ್ಲಿ ಭಾಗವಹಿಸಿ ಬಾಳೆಹಣ್ಣನ್ನು ರಥದಲ್ಲಿ ಪವಡಿಸಿದ್ದ ಪರಮಾತ್ಮನಿಗೆ ಎಸೆದರು.
ವೀರೇಶ್ ನಾಯಕ ಎಲ್, ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ
PublicNext
01/02/2026 10:07 pm
LOADING...