ಬೆಳಗಾವಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶಕ್ಕೆ ಪ್ರಗತಿದಾಯಕ ಬಜೆಟ್ ಮಂಡಿಸಿದ್ದಾರೆ. ಶಿಕ್ಷಣ, ಕೃಷಿ, ನೀರಾವರಿ, ಸಾರಿಗೆ, ಸಣ್ಣ ಹಾಗೂ ಬೃಹತ್ ಕೈಗಾರಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಇದು ಮುಂಬರುವ ದಿನಗಳಲ್ಲಿ ನವ ಕ್ರಾಂತಿಗೆ ನಾಂದಿ ಹಾಡಲಿದೆ.
ಆಶಾಕಿರಣದೊಂದಿಗೆ ನವ ಸಂಕಲ್ಪ
ಕೇಂದ್ರ ಸರ್ಕಾರವು ಮಹಿಳಾ ಸಬಲೀಕರಣಕ್ಕೂ ಹೆಚ್ಚಿನ ಆದ್ಯತೆ ನೀಡಿದೆ. ಪ್ರತಿ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ಸ್ಥಾಪನೆಗೆ ಅನುದಾನ ಒದಗಿಸಿರುವುದು ಇದರ ಭಾಗವಾಗಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೂ ಹೆಚ್ಚಿನ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಈ ಬಜೆಟ್ ರೈತರ ಬದುಕಿಗೆ ಆಶಾಕಿರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕಳೆದ ವರ್ಷಕ್ಕಿಂತಲೂ ಈ ಬಾರಿ ಹೊಸತನಕ್ಕೆ ಒತ್ತು ನೀಡಿದೆ. ಆತ್ಮನಿರ್ಭರ ಭಾರತದ ಕಲ್ಪನೆಗೆ ಹೊಸ ಸಂಕಲ್ಪದೊಂದಿಗೆ ವ್ಯಾಖ್ಯಾನ ನೀಡಲಾಗಿದ್ದು, ಇದರಿಂದ ದೇಶದಲ್ಲಿ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಿ, ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ.
ಒಟ್ಟಾರೆ, ಇದೊಂದು ಪ್ರಗತಿದಾಯಕ ಹಾಗೂ ಅರ್ಥಪೂರ್ಣ ಬಜೆಟ್ ಎನ್ನುವುದರಲ್ಲಿ ಸಂದೇಹವಿಲ್ಲ.
PublicNext
01/02/2026 10:44 pm
LOADING...