ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂದೂ ಧರ್ಮದ ಸಂರಕ್ಷಣೆ ಕೇವಲ ಸಂಘಟನೆಗಳ ಜವಾಬ್ದಾರಿಯಲ್ಲ

ಸೋಮವಾರಪೇಟೆ: ಹಿಂದೂ ಧರ್ಮದ ಸಂರಕ್ಷಣೆ ಕೇವಲ ಸಂಘಟನೆಗಳ ಜವಾಬ್ದಾರಿಯಲ್ಲ, ಅದೂ ಸರ್ವ ಹಿಂದೂ ಸಮಾಜದ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ಆರ್ ಎಸ್ ಎಸ್ ನ ಪ್ರಾಂತ ಪ್ರಚಾರಕ್ ಗುರುಪ್ರಸಾದ್ ಅಭಿಪ್ರಾಯಪಟ್ಟರು.

ಭಾನುವಾರದಂದು ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿಕ್ಸೂಚಿ ಭಾಷಣ ಮಾಡಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶದಲ್ಲಿ ಆರಂಭವಾಗಿ 100 ವರ್ಷ ಪೂರೈಸುವ ಮೂಲಕ ವಿಶ್ವದ ಅತಿ ದೊಡ್ಡ ಸಂಘಟನೆಯಾಗಿ ಬೆಳೆದು ನಿಂತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಹಿಂದೂ ಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಆಯೋಜಿಸುವ ಮುಖೇನ ದೇಶದಲ್ಲಿನ ಹಿಂದೂ ಬಾಂಧವರನ್ನು ಒಗ್ಗೂಡಿಸುವ ಕೆಲಸಕ್ಕೆ ಆರ್ ಎಸ್.ಎಸ್ ಮುಂದಾಗಿದೆ, ಭಾರತ ಮಾತೆಯ ಮಕ್ಕಳಾದ ನಾವೆಲ್ಲರೂ ಒಗ್ಗೂಡಿ ಮಾತೆಯ ರಕ್ಷಣೆ ಮಾಡಬೇಕಾಗಿದೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

02/02/2026 11:21 am

Cinque Terre

240

Cinque Terre

0

ಸಂಬಂಧಿತ ಸುದ್ದಿ