ರಾಮನಗರ: ಕನಕಪುರದಲ್ಲಿ ಅಡುಗೆ ಮಾಡುವಾಗ ಅನಿಲ ಸೋರಿಕೆಯಿಂದ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ದುರಂತ ಸಾವನ್ನಪ್ಪಿದ್ದಾರೆ. ಮೃತರನ್ನು ಸಿದ್ದರಾಜು (55), ಅವರ ಪತ್ನಿ ಚಂದ್ರಮ್ಮ (50), ಮತ್ತು ಮಗ ಪ್ರಶಾಂತ್ (22) ಎಂದು ಗುರುತಿಸಲಾಗಿದೆ.
ಕಳೆದ ನಾಲ್ಕು ದಿನಗಳ ಹಿಂದೆ ಕನಕಪುರ ನಗರದ ಅಮರನಾರಾಯಣ ಬ್ಲಾಕ್‌ನಲ್ಲಿ ಈ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಅನಿಲ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಮೂವರೂ ಕೊನೆಯುಸಿರೆಳೆದಿದ್ದಾರೆ.
ತಂದೆ, ತಾಯಿ ಮತ್ತು ಮಗನನ್ನು ಅನಿರೀಕ್ಷಿತವಾಗಿ ಕಳೆದುಕೊಂಡ ಕುಟುಂಬದ ಸದಸ್ಯರು, ಸಂಬಂಧಿಕರು ಹಾಗೂ ಸ್ಥಳೀಯರ ಆಕ್ರಂದನ ಮುಗಿಲು ಮುಟ್ಟಿದೆ. ಕನಕಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದ್ದು, ಪ್ರಕರಣ ದಾಖಲಾಗಿದೆ.
PublicNext
02/02/2026 01:17 pm
LOADING...