ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಾದಾಚಾರಿಗೆ ಗುದ್ದಿದ ಬೈಕ್ ಸವಾರ : ಸ್ಥಳದಲ್ಲೇ ಸಾವನ್ನಪ್ಪಿದ ಅಪರಿಚಿತ ವ್ಯಕ್ತಿ

ಹುಬ್ಬಳ್ಳಿ: ರಸ್ತೆ ದಾಟುತ್ತಿರುವಾಗ ಪಾದಾಚಾರಿಯೊಬ್ಬರಿಗೆ ವೇಗವಾಗಿ ಬಂದ ಬೈಕ್ ಸವಾರ ಗುದ್ದಿದ ಪರಿಣಾಮ, ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ವರೂರ ಬಳಿ ನಡೆದಿದೆ.

ಹುಬ್ಬಳ್ಳಿಯ ಇಬ್ಬರು ಯುವಕರು ಮೈಲಾರಕ್ಕೆ ಹೋಗುತ್ತಿರುವಾಗ, ಪಾದಾಚಾರಿಯೊಬ್ಬ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್ ಸವಾರರು ನಿಯಂತ್ರಣ ತಪ್ಪಿ ಆ ವ್ಯಕ್ತಿಗೆ ಗುದ್ದಿದ್ದಾರೆ.‌ ಗುದ್ದಿದ ರಭಸಕ್ಕೆ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಘಟನಾ ಸ್ಥಳಕ್ಕೆ ಇನ್ಸ್ಪೆಕ್ಟರ್ ಮುರಗೇಶ ಚೆನ್ನಣ್ಣವರು ಸಾವನ್ನಪ್ಪಿದ ಅಪರಿಚಿತ ವ್ಯಕ್ತಿ ಯಾರು ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

02/02/2026 02:17 pm

Cinque Terre

10.15 K

Cinque Terre

0

ಸಂಬಂಧಿತ ಸುದ್ದಿ