ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ನ್ಯಾಯಾಲಯದ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲ! ಡಿಸಿ ಕಚೇರಿ ಮುಂದೆ ಕಡತ ಚೆಲ್ಲಿ ಭೂ ಮಾಲೀಕನ ಆಕ್ರೋಶ

ಹಾಸನ: ನ್ಯಾಯಾಲಯದ ಸ್ಪಷ್ಟ ಆದೇಶವಿದ್ದರೂ ಭೂಮಿಯ ಖಾತೆ ಮಾಡಿಕೊಡಲು ಕಂದಾಯ ಇಲಾಖೆ ಅಧಿಕಾರಿಗಳು ಲಂಚಕ್ಕೆ ಬೇಡಿಕೆಯಿಟ್ಟಿದ್ದರಿಂದ ಬೇಸತ್ತ ರೈತರೊಬ್ಬರು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ದಾಖಲೆಗಳನ್ನು ಬಿಸಾಡಿ ವಿನೂತನವಾಗಿ ಪ್ರತಿಭಟಿಸಿದ ಘಟನೆ ಸೋಮವಾರ ನಡೆದಿದೆ.

ಜಿಲ್ಲೆಯ ಭೂ ಮಾಲೀಕರೊಬ್ಬರು ತಮ್ಮ ಜಮೀನಿನ ಖಾತೆ ಬದಲಾವಣೆಗಾಗಿ ಕಳೆದ ಹಲವು ತಿಂಗಳಿಂದ ಕಂದಾಯ ಕಚೇರಿಗಳಿಗೆ ಅಲೆಯುತ್ತಿದ್ದರು. ಈ ವಿಚಾರವಾಗಿ ನ್ಯಾಯಾಲಯವು ಭೂ ಮಾಲೀಕರ ಪರವಾಗಿ ತೀರ್ಪು ನೀಡಿ, ಕೂಡಲೇ ಖಾತೆ ಮಾಡುವಂತೆ ಆದೇಶಿಸಿತ್ತು.

ಆದರೆ, ನ್ಯಾಯಾಲಯದ ಆದೇಶದ ಪ್ರತಿಯೊಂದಿಗೆ ಕಚೇರಿಗೆ ಹೋದರೂ ಅಧಿಕಾರಿಗಳು ಮಾತ್ರ ಕೆಲಸ ಮಾಡಿಕೊಡದೆ ಸತಾಯಿಸುತ್ತಿದ್ದರು ಎಂದು ಸಂತ್ರಸ್ತರು ಆರೋಪಿಸಿದ್ದಾರೆ.ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ"ಕೋರ್ಟ್ ಆರ್ಡರ್ ತಂದರೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಕೆಲಸ ಮಾಡಿಕೊಡಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆ.

ಸಾಮಾನ್ಯ ಜನರ ನೋವಿಗೆ ಸ್ಪಂದಿಸುವವರೇ ಇಲ್ಲದಂತಾಗಿದೆ," ಎಂದು ಭೂ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಭ್ರಷ್ಟಾಚಾರ ಮತ್ತು ವಿಳಂಬ ನೀತಿಯಿಂದ ಮನನೊಂದ ಅವರು, ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲೇ ತಮ್ಮ ಕೈಯಲ್ಲಿದ್ದ ಫೈಲ್‌ಗಳು ಮತ್ತು ಪ್ರಮುಖ ದಾಖಲೆಗಳನ್ನು ನೆಲಕ್ಕೆ ಬಿಸಾಡಿ ಆಕ್ರೋಶ ಹೊರಹಾಕಿದರು.

Edited By : PublicNext Desk
PublicNext

PublicNext

02/02/2026 03:47 pm

Cinque Terre

10.53 K

Cinque Terre

0

ಸಂಬಂಧಿತ ಸುದ್ದಿ