ಸಾಗರದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಜಾತ್ರೆಗೆ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಸುಮಾರು 20 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಇದಕ್ಕಾಗಿ 500 ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಉಪಾಧೀಕ್ಷಕ ಡಾ. ಬೆನಕಪ್ರಸಾದ್ ಎನ್.ಜೆ. ತಿಳಿಸಿದ್ದಾರೆ.
ಜಾತ್ರೆಯ ಬಂದೋಬಸ್ತ್‌ಗಾಗಿ ಮೂವರು ಉಪ ಪೊಲೀಸ್ ಅಧೀಕ್ಷಕರು (ಡಿವೈಎಸ್‌ಪಿ), ಏಳು ಸರ್ಕಲ್ ಇನ್ಸ್‌ಪೆಕ್ಟರ್‌ಗಳು, 14 ಸಬ್ ಇನ್ಸ್‌ಪೆಕ್ಟರ್‌ಗಳು, 44 ಸಹಾಯಕ ಸಬ್ ಇನ್ಸ್‌ಪೆಕ್ಟರ್‌ಗಳು (ಎ.ಎಸ್.ಐ.), 194 ಆರಕ್ಷಕರು, 37 ಮಹಿಳಾ ಸಿಬ್ಬಂದಿ ಮತ್ತು 200 ಹೋಮ್‌ಗಾರ್ಡ್‌ಗಳು ಸೇರಿದಂತೆ ಒಟ್ಟು 500 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ, ಜಾತ್ರೆ ನಡೆಯುವ 50 ಪ್ರಮುಖ ಸ್ಥಳಗಳನ್ನು ಗುರುತಿಸಲಾಗಿದ್ದು, ಅಲ್ಲಿ ಸುಮಾರು 150 ಸಿಸಿ ಕ್ಯಾಮರಾಗಳನ್ನು ಅಳವಡಿಸಿ ನಿರಂತರ ಕಣ್ಗಾವಲು ಇಡಲಾಗಿದೆ.
Kshetra Samachara
02/02/2026 04:27 pm
LOADING...