ಹಾಸನ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಜೇನುಕಲ್ ಸಿದ್ದೇಶ್ವರ ಬೆಟ್ಟದ ದರ್ಶನ ಮುಗಿಸಿಕೊಂಡು ಹಿಂದಿರುಗುತ್ತಿದ್ದ ಭಕ್ತರಿದ್ದ ಕಾರೊಂದು ದುದ್ದ ಹೋಬಳಿ ವ್ಯಾಪ್ತಿಯಲ್ಲಿ ನಿಯಂತ್ರಣ ತಪ್ಪಿ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಅರಸೀಕೆರೆ ತಾಲ್ಲೂಕಿನ ಜೇನುಕಲ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ನಾಲ್ವರು ಭಕ್ತರು ಮೊರಿಸ್ ಗ್ಯಾರೆಜ್ (MG) ಕಾರಿನಲ್ಲಿ ಹಿಂದಿರುಗುತ್ತಿದ್ದರು. ದುದ್ದ ಸಮೀಪ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರಕ್ಕೆ ಬಲವಾಗಿ ಅಪ್ಪಳಿಸಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಆದರೆ, ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ನೆರವಿನೊಂದಿಗೆ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ
ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ದುದ್ದ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
PublicNext
02/02/2026 05:11 pm
LOADING...