ಶಿವಮೊಗ್ಗ : ನಮ್ಮ ತೆರಿಗೆ ನಮ್ಮ ಹಕ್ಕು’ ಎಂಬ ಘೋಷಣೆಯಡಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕೇವಲ ನಾಟಕವಾಗಿದ್ದು, ಗ್ಯಾರಂಟಿ ಯೋಜನೆಗಳ ಹೊರೆ ತಗ್ಗಿಸಲು ಅಬಕಾರಿ ತೆರಿಗೆ ಗುರಿಯನ್ನು 40 ಸಾವಿರ ಕೋಟಿ ರೂ.ಗೆ ಏರಿಸಲಾಗಿದೆ.
ಮುಂದಿನ ದಿನಗಳಲ್ಲಿ ಅಬಕಾರಿ ಗುತ್ತಿಗೆದಾರರು ಇದೇ ಬೇಡಿಕೆಯನ್ನು ಮುಂದಿಟ್ಟು ವಿಧಾನಸೌಧ ಮುತ್ತಿಗೆ ಹಾಕಿದರೆ ಸರ್ಕಾರ ಏನು ಉತ್ತರ ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು,
ರಾಜ್ಯ ಸರ್ಕಾರದ ಅವ್ಯವಸ್ಥೆಯಿಂದ ಅಧಿಕಾರಿಗಳು ರಾತ್ರಿ 3 ಗಂಟೆಯವರೆಗೂ ಕೆಲಸ ಮಾಡುವಂತಾಗಿದೆ. ಇದು ಜನಪರ ಆಡಳಿತವಲ್ಲ, ಅಧಿಕಾರಿಗಳ ಮೇಲೆ ಒತ್ತಡ ಹೇರಿದ ಅರಾಜಕ ಆಡಳಿತವಾಗಿದೆ ಎಂದು ಹೇಳಿದರು.
ಈಶಾನ್ಯ ರಾಜ್ಯಗಳಿಗೆ 6 ಸಾವಿರ ಕೋಟಿ ರೂ. ಅನುದಾನ ನೀಡಿರುವುದು ಕೇಂದ್ರ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಇಂತಹ ದೃಢ ನಿರ್ಧಾರಗಳೇ ಇರಲಿಲ್ಲ ಎಂದು ಹೇಳಿದರು.
ಆದಾಯ ತೆರಿಗೆ ಮಿತಿಯನ್ನು 12 ಲಕ್ಷ ರೂ.ವರೆಗೆ ವಿನಾಯಿತಿ ನೀಡುವ ಮೂಲಕ ಮಧ್ಯಮ ವರ್ಗಕ್ಕೆ ಮಹತ್ವದ ರಿಲೀಫ್ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ದ್ವೇಷ ಭಾಷಣ ಕಾಯ್ದೆಯನ್ನು ಆತುರಾತುರವಾಗಿ ಜಾರಿಗೊಳಿಸಿದ್ದು, ಇದು ವಿಪಕ್ಷಗಳನ್ನು ದಮನ ಮಾಡುವ ರಾಜಕೀಯ ಅಸ್ತ್ರವಾಗಿದೆ ಎಂದರು.
PublicNext
02/02/2026 06:51 pm
LOADING...