ಬೆಳಗಾವಿ: ಕರ್ನಾಟಕ ರಾಜ್ಯವು ಜ್ಞಾನ, ನಾವೀನ್ಯತೆ ಮತ್ತು ಉತ್ತಮ ಆಡಳಿತದ ಕ್ಷೇತ್ರಗಳಲ್ಲಿ ಯಾವಾಗಲೂ ಪ್ರಮುಖ ಪಾತ್ರ ವಹಿಸಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ತನ್ನ ಬೆಳಗಾವಿ ಕ್ಯಾಂಪಸ್ ಜ್ಞಾನ ಸಂಗಮದಲ್ಲಿ ಆಯೋಜಿಸಿದ್ದ ತನ್ನ 25ನೇ ವಾರ್ಷಿಕ ಘಟಿಕೋತ್ಸವದಲ್ಲಿ ( ಭಾಗ-2) ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, “ವಿಶ್ವೇಶ್ವರಯ್ಯ ಅವರು ತಮ್ಮ ದೂರದೃಷ್ಟಿ ಇಟ್ಟುಕೊಂಡು ಈ ವಿಶ್ವವಿದ್ಯಾಲಯ ಆರಂಭಿಸಿದ್ದಾರೆ. ತಂತ್ರಜ್ಞಾನಗಳು ಸಾಮಾನ್ಯ ವರ್ಗದ ಜನರ ಸಮಸ್ಯೆಗಳನ್ನು ಬಗೆಹರಿಸುವಂತಿರಬೇಕು ಎಂದರು.
ಪ್ರಸ್ತುತ ರಾಜ್ಯವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ ವಿಜ್ಞಾನ, ನವೋದ್ಯಮ ಸಂಸ್ಕೃತಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಆತ್ಮವಿಶ್ವಾಸದ ಮತ್ತು "ಅಭಿವೃದ್ಧಿ ಹೊಂದಿದ ಭಾರತ"ವನ್ನು ಸಾಧಿಸುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವ ಭಾರತ ಮತ್ತು ಕರ್ನಾಟಕವನ್ನು ಯುವಪೀಳಿಗೆ ಪ್ರತಿನಿಧಿಸುತ್ತಾರೆ. ಈ ಗುರಿಯನ್ನು ಸಾಧಿಸುವಲ್ಲಿ ಜ್ಞಾನ, ಕಠಿಣ ಪರಿಶ್ರಮ ಮತ್ತು ನಿಮ್ಮ ಕರ್ತವ್ಯ ಪ್ರಜ್ಞೆ ಪ್ರಮುಖ ಪಾತ್ರ ವಹಿಸುತ್ತದೆ " ಎಂದು ತಿಳಿಸಿದರು.
“ನಿಮ್ಮ ಈ ಸಾಧನೆಗೆ ನಿಮ್ಮ ಪೋಷಕರು, ಅಧ್ಯಾಪಕರು ಮತ್ತು ವಿಶ್ವವಿದ್ಯಾಲಯದ ಕುಟುಂಬದ ಕೊಡುಗೆಗಳು ಅಪಾರ. ಅವರ ಮಾರ್ಗದರ್ಶನ, ತ್ಯಾಗ ಮತ್ತು ನಿರಂತರ ಪ್ರಯತ್ನಗಳಿಲ್ಲದೆ, ನಿಮ್ಮ ಶೈಕ್ಷಣಿಕ ಪ್ರಯಾಣ ಸಾಧ್ಯವಾಗುತ್ತಿರಲಿಲ್ಲ. ಅವರೆಲ್ಲರಿಗೂ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಎಲ್ಲಾ ಪದವಿ ವಿಜೇತರು ಮತ್ತು ಚಿನ್ನದ ಪದಕ ವಿಜೇತರಿಗೆ ಮತ್ತೊಮ್ಮೆ ನನ್ನ ಹೃತ್ಪೂರ್ವಕ ಅಭಿನಂದನೆಗಳು” ಎಂದು ಶುಭ ಹಾರೈಸಿದರು.
PublicNext
02/02/2026 06:56 pm
LOADING...