ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜನರ ನಿರೀಕ್ಷೆ ಹುಸಿ, ನಿರ್ಮಲಾ ಬಜೆಟ್ ಅತ್ಯಂತ ದುರ್ಬಲ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ದೇಶದ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಜನ ಸಮುದಾಯ ಅನೇಕ ನಿರೀಕ್ಷೆಗಳನ್ನು ಮಾಡಿತ್ತು. ಎಲ್ಲವೂ ಹುಸಿಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 9 ಬಜೆಟ್‌ಗಳಲ್ಲಿ, ಇದು ಅತ್ಯಂತ ದುರ್ಬಲ ಬಜೆಟ್ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಜೆಟ್‌ಗಳನ್ನು ಕೃಷಿ, ಕೈಗಾರಿಕಾ ವಲಯಗಳಿಗೆ ಪ್ರಾತಿನಿಧ್ಯ ಕೊಡುತ್ತಿದ್ದರು. ಬಡತನ ನಿರ್ಮೂಲನೆಗೆ ಸಂಬಂಧಿಸಿದಂತೆ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಿದ್ದರು.

ಮನಮೋಹನ್ ಸಿಂಗ್ ಅವರು ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ನೀಡಿದ್ದರು. ಇಡೀ ಪ್ರಪಂಚದಲ್ಲಿ ಅಂತಹ ಕಾರ್ಯಕ್ರಮ ಯಾವ ದೇಶಗಳು ನೀಡಿರಲಿಲ್ಲ. ಅದೆಲ್ಲ ಗಾಳಿಗೆ ತೂರಿ, ಇಡೀ ದೇಶಕ್ಕೆ ನಿರಾಸೆ ಮಾಡಿದ್ದಾರೆ ಎಂದು ಟೀಕಿಸಿದರು.

53.50 ಲಕ್ಷ ಕೋಟಿ ರೂ.ಗಳಲ್ಲಿ 16 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ ಮಾಡಿಕೊಂಡು, ವಿಧಾನಸಭೆಯಲ್ಲಿ ನಮಗೆ ನೀತಿಪಾಠ ಹೇಳುತ್ತಾರೆ. ಅಷ್ಟೊಂದು ಸಾಲ ಮಾಡಿಕೊಂಡು ಜನ ಸಮುದಾಯಕ್ಕೆ ಏನು ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ ಅವರು, ಕರ್ನಾಟಕಕ್ಕೆ ಏನು ನೀಡಿಲ್ಲ. ಹೇಳಿಕೊಳ್ಳುವಂತಹ ಒಂದೇ ಒಂದು ಯೋಜನೆಯನ್ನು ನೀಡಿಲ್ಲ. ನೀರಾವರಿ, ಕೃಷಿ, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಒತ್ತು ಕೊಡಬೇಕಿತ್ತು. ಯಾವುದೇ ಯೋಜನೆಯನ್ನು ನೀಡದೇ ಇರುವುದನ್ನು ಬಜೆಟ್ ಅಂತ ಕರೆಯಬೇಕೆ ಎಂದರು.

Edited By :
PublicNext

PublicNext

02/02/2026 07:24 pm

Cinque Terre

12.38 K

Cinque Terre

0

ಸಂಬಂಧಿತ ಸುದ್ದಿ