ಚಿಕ್ಕಮಗಳೂರು: ಸರ್ಫೇಸಿ ಕಾಯ್ದೆಯ ಅಡಿಯಲ್ಲಿ ಕಾಫಿ ಬೆಳೆಗಾರರ ತೋಟಗಳನ್ನು ಬ್ಯಾಂಕುಗಳು ಹರಾಜು ಹಾಕುತ್ತಿರುವ ಗಂಭೀರ ಸಮಸ್ಯೆಯ ಕುರಿತು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಹತ್ವದ ಚರ್ಚೆ ನಡೆಸಿದರು. ಚಿಕ್ಕಮಗಳೂರು, ಕೊಡಗು ಸೇರಿದಂತೆ ದೇಶದ ವಿವಿಧ ಭಾಗಗಳ ಕಾಫಿ ಬೆಳೆಗಾರರು ಸುಸ್ತಿ ಬಾಕಿಯ ಕಾರಣದಿಂದಾಗಿ ತಮ್ಮ ತೋಟಗಳನ್ನು ಆನ್‌ಲೈನ್ ಹರಾಜಿನ ಮೂಲಕ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
ಈ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟ ಸಂಸದರು, ಕೂಡಲೇ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಿ ರೈತರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು. ಈ ವಿಷಯಕ್ಕೆ ಪೂರಕವಾಗಿ ಸ್ಪಂದಿಸಿದ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕದ ಸಂಸದರ ನಿಯೋಗದೊಂದಿಗೆ ಕೇಂದ್ರ ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಸಭೆ ನಡೆಸಲು ಸಹಮತ ವ್ಯಕ್ತಪಡಿಸಿದರು. ಬೆಳೆಗಾರರ ಹಿತದೃಷ್ಟಿಯಿಂದ ಹರಾಜು ಪ್ರಕ್ರಿಯೆಯನ್ನು ತಪ್ಪಿಸಿ, ಸುಸ್ಥಿರ ಪರಿಹಾರ ಕಂಡುಕೊಳ್ಳುವ ಬಗ್ಗೆ ನಿಯೋಗವು ಶೀಘ್ರದಲ್ಲೇ ವಾಣಿಜ್ಯ ಸಚಿವರೊಂದಿಗೆ ಚರ್ಚಿಸಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಮಾಹಿತಿ ನೀಡಿದ್ದಾರೆ.
Kshetra Samachara
02/02/2026 08:11 pm
LOADING...