ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ವರಿಷ್ಠರು ಭಿನ್ನಮತ ಶಮನ ಮಾಡುತ್ತಾರೆ

ಹಾವೇರಿ: ಪಕ್ಷದ ವರಿಷ್ಠರು ಜನಪ್ರತಿನಿಧಿಗಳ ಅಭಿಪ್ರಾಯ, ಸಮೀಕ್ಷೆ ಮಾಡಿಸಿ ಅಭ್ಯರ್ಥಿಯನ್ನಾಗಿ ನನ್ನನ್ನು ಘೋಷಿಸಿದ್ದಾರೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬೇಕಾಯಿ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು

ಎಲ್ಲ ಆಕಾಂಕ್ಷಿಗಳ ಜೊತೆಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.

ಪಕ್ಷದ ನಾಯಕರು ಎಲ್ಲರನ್ನೂ ಕರೆದು ಮಾತನಾಡುತ್ತಾರೆ. ಕುಬೇರಪ್ಪರನ್ನು ಭೇಟಿಯಾಗಿ ಮಾತನಾಡಿದ್ದೇನೆ, ಮತ್ತೊಮ್ಮೆ ಭೇಟಿಯಾಗಿ ಮಾತನಾಡುತ್ತೇನೆ. ಅವರ ಸೇವೆ, ತ್ಯಾಗ ಗುರುತಿಸಿ ಪಕ್ಷದ ವರಿಷ್ಠರು ಸೂಕ್ತ ಸ್ಥಾನಮಾನ ಕೊಡುತ್ತಾರೆ ಎಂದು ಲಿಂಬೆಕಾಯಿ ತಿಳಿಸಿದರು.

ಜನರ ಅಭಿಪ್ರಾಯ, ಗೆಲ್ಲುವ ಲೆಕ್ಕಾಚಾರ ಹೀಗೆ ಎಲ್ಲವನ್ನೂ ನೋಡಿಕೊಂಡು ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಆಯ್ಕೆಯಾಗುವುದರಲ್ಲಿ ಎರಡು ಮಾತಿಲ್ಲ ಎಂಬ ವಿಶ್ವಾಸವನ್ನ ಲಿಂಬೆಕಾಯಿ ವ್ಯಕ್ತಪಡಿಸಿದರು.

Edited By : PublicNext Desk
Kshetra Samachara

Kshetra Samachara

02/02/2026 08:36 pm

Cinque Terre

4.54 K

Cinque Terre

0

ಸಂಬಂಧಿತ ಸುದ್ದಿ