ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಶೀಘ್ರ 2 ಸಾವಿರ ಹುದ್ದೆಗಳ ಭರ್ತಿ - ಸಚಿವ ಸುಧಾಕರ್‌

ಬೆಳಗಾವಿ: “ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಸೇರಿ ಅಂದಾಜು 2 ಸಾವಿರ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ” ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್‌ ಹೇಳಿದರು.

ವಿಟಿಯು ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸರಕಾರಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ – 186, ಪಾಲಿಟೆಕ್ನಿಕ್‌ನಲ್ಲಿ 941, ಕಾಲೇಜು ಶಿಕ್ಷಣ ಇಲಾಖೆಯಲ್ಲಿ 826, ಯುವಿಸಿಇನಲ್ಲಿ 79 ಸೇರಿದಂತೆ ಅಂದಾಜು 2 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು. ಆ ಮೂಲಕ ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ನೌಕರರ ಕೊರತೆಯನ್ನು ನೀಗಿಸಲಾಗುವುದು ಎಂದರು. ವಿಟಿಯು ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಇದಕ್ಕಾಗಿ ಏಷ್ಯನ್‌ ಡೆವಲೆಪ್‌ಮೆಂಟ್‌ ಬ್ಯಾಂಕ್‌ನಿಂದಾಗಿ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಆರಂಭಿಸುತ್ತಿದ್ದೇವೆ. ಇಂದು ಪದವಿ ಪಡೆದ ವಿದ್ಯಾರ್ಥಿಗಳ ಜೀವನ ಉಜ್ವಲವಾಗಿರಲಿ” ಎಂದು ಶುಭ ಹಾರೈಸಿದರು.

Edited By :
PublicNext

PublicNext

02/02/2026 08:36 pm

Cinque Terre

17.15 K

Cinque Terre

0

ಸಂಬಂಧಿತ ಸುದ್ದಿ