ಕಡೂರು: ರೈಲ್ವೆ ನೌಕರನ ಮೇಲೆ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕಡೂರು ತಾಲ್ಲೂಕಿನ ಚೌಳಹಿರಿಯೂರಿನಲ್ಲಿ ನಡೆದಿದೆ. ಯತೀಶ್ ಕುಮಾರ್ ಅವರ ಸಹೋದರ ಮೋಹನ್ ಜೊತೆಗೂಡಿ ಚೌಳಹಿರಿಯೂರಿನಲ್ಲಿರುವ ತಂಗಿಯ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ, ದಾರಿಯಲ್ಲಿ ಪರಿಚಿತರಾದ ಪುಟ್ಟರಾಜು ಅವರನ್ನು ಮಾತನಾಡಿಸಲು ಬೈಕ್ ನಿಲ್ಲಿಸಿದ್ದಾರೆ.
ಈ ವೇಳೆ ಹಿಂದಿನಿಂದ ಬಂದ ಬೈಕ್ ಸವಾರನೊಬ್ಬ ಇವರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಇದನ್ನು ಪ್ರಶ್ನಿಸಿದಾಗ ಗಲಾಟೆ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋದಾಗ, ಆರೋಪಿ ಯತೀಶ್ ಮತ್ತು ಆತನ ಜೊತೆಗಿದ್ದ ಮಲ್ಲೇಶ, ರಘು ಹಾಗೂ ಸ್ವಾಮಿ ಎಂಬುವವರು ಯತೀಶ್ ಕುಮಾರ್ ಮತ್ತು ಅವರ ಸಹೋದರನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.
ಗಲಾಟೆ ಬಿಡಿಸಲು ಮುಂದಾದ ಯತೀಶ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಮತ್ತು ಇತರರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಯತೀಶ್ ಕುಮಾರ್ ಮತ್ತು ಮೋಹನ್ ಅವರಿಗೆ ಮೊದಲು ಯಗಟಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
PublicNext
02/02/2026 08:48 pm
LOADING...