ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದ್ವೇಷ ಭಾಷಣ ಮಸೂದೆ ನೆನೆಗುದಿಗೆ ಬೀಳಿಸಲು ರಾಷ್ಟ್ರಪತಿಗೆ ವರ್ಗ

ಬೆಂಗಳೂರು: ದೇಶದ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಜನ ಸಮುದಾಯ ಅನೇಕ ನಿರೀಕ್ಷೆಗಳನ್ನು ಮಾಡಿತ್ತು. ಎಲ್ಲವೂ ಹುಸಿಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 9 ಬಜೆಟ್‌ಗಳಲ್ಲಿ, ಇದು ಅತ್ಯಂತ ದುರ್ಬಲ ಬಜೆಟ್ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಜೆಟ್‌ಗಳನ್ನು ಕೃಷಿ, ಕೈಗಾರಿಕಾ ವಲಯಗಳಿಗೆ ಪ್ರಾತಿನಿಧ್ಯ ಕೊಡುತ್ತಿದ್ದರು. ಬಡತನ ನಿರ್ಮೂಲನೆಗೆ ಸಂಬಂಧಿಸಿದಂತೆ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಿದ್ದರು. ಮನಮೋಹನ್ ಸಿಂಗ್ ಅವರು ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ನೀಡಿದ್ದರು. ಇಡೀ ಪ್ರಪಂಚದಲ್ಲಿ ಅಂತಹ ಕಾರ್ಯಕ್ರಮ ಯಾವ ದೇಶಗಳು ನೀಡಿರಲಿಲ್ಲ. ಅದೆಲ್ಲ ಗಾಳಿಗೆ ತೂರಿ, ಇಡೀ ದೇಶಕ್ಕೆ ನಿರಾಸೆ ಮಾಡಿದ್ದಾರೆ‌ ಎಂದು ಟೀಕಿಸಿದರು.

53.50 ಲಕ್ಷ ಕೋಟಿ ರೂ.ಗಳಲ್ಲಿ 16 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ‌ ಮಾಡಿಕೊಂಡು, ವಿಧಾನಸಭೆಯಲ್ಲಿ ನಮಗೆ ನೀತಿಪಾಠ ಹೇಳುತ್ತಾರೆ. ಅಷ್ಟೊಂದು ಸಾಲ‌ ಮಾಡಿಕೊಂಡು ಜನ ಸಮುದಾಯಕ್ಕೆ ಏನು ಕೊಟ್ಟಿದ್ದೀರಾ? ಎಂದು ಪ್ರಶ್ನಿಸಿದ ಅವರು, ಕರ್ನಾಟಕಕ್ಕೆ ಏನು ನೀಡಿಲ್ಲ. ಹೇಳಿಕೊಳ್ಳುವಂತಹ ಒಂದೇ ಒಂದು ಯೋಜನೆಯನ್ನು ನೀಡಿಲ್ಲ. ನೀರಾವರಿ, ಕೃಷಿ,‌ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಒತ್ತು ಕೊಡಬೇಕಿತ್ತು. ಯಾವುದೇ ಯೋಜನೆಯನ್ನು ನೀಡದೇ ಇರುವುದನ್ನು ಬಜೆಟ್ ಅಂತ ಕರೆಯಬೇಕೆ? ಎಂದರು.

ವಿಶ್ವದಲ್ಲಿ ಶಿಕ್ಷಣ ವಲಯ ಸಾಕಷ್ಟು ವೇಗವಾಗಿ ಬದಲಾವಣೆ ಕಾಣುತ್ತಿದೆ. ದೇಶದಲ್ಲಿ ಶಿಕ್ಷಣವನ್ನೇ ಹಿಂದೆ ತಳ್ಳಿದ್ದಾರೆ. ರಾಜ್ಯಕ್ಕೆ ಐಐಟಿ, ಏಮ್ಸ್ ಸಂಸ್ಥೆಗಳನ್ನು ನಿರೀಕ್ಷೆ ಮಾಡಲಾಗಿತ್ತು. ಆದರೆ, ಪ್ಲಾಸ್ಟಿಕ್, ಬೆಂಕಿ ಪಟ್ಟಣದ ಬೆಲೆ‌ ಕಡಿಮೆ ಮಾಡಿದ್ದಾರೆ. ಇದೊಂದು ನಿರಾಶಾದಾಯಕ ಬಜೆಟ್ ಎಂದು ಹೇಳಿದರು.

ದ್ವೇಷ ಭಾಷಣ ಮಸೂದೆಯಲ್ಲಿನ 28 ಅಂಶಗಳನ್ನು ರಾಜ್ಯಪಾಲರು ಪ್ರಶ್ನಿಸಿದ್ದಾರೆ. ಅದನ್ನು ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ. ಮುಂದೆ ಏನಾಗುತ್ತದೆ ನೋಡೋಣ. ರಾಷ್ಟ್ರಪತಿಗಳು ಪರಿಶೀಲಿಸಿ ವಾಪಸ್ ಕೊಟ್ಟರೆ, ಬದಲಾವಣೆ ಮಾಡಿ ಕಳಿಸಲಾಗುವುದು ಎಂದರು.

Edited By :
PublicNext

PublicNext

02/02/2026 08:54 pm

Cinque Terre

24.57 K

Cinque Terre

1

ಸಂಬಂಧಿತ ಸುದ್ದಿ