#ಮಲೇಶ್ವರಂ
ಬೆಂಗಳೂರು:ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಫೆ.5ರಿಂದ ಫೆ.9ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ.
ಅಖಿಲ ಭಾರತ ಕೋಟಾದ 3ನೇ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿ ಎಂಸಿಸಿ ಪರಿಷ್ಕರಿಸಿದ ಕಾರಣ ಫೆ.2ರ ಬದಲಿಗೆ ಫೆ.5ರಿಂದ ಇಚ್ಛೆ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಫೆ.9ರಂದು ಬೆಳಿಗ್ಗೆ 8 ಗಂಟೆವರೆಗೆ ಇಚ್ಛೆ ದಾಖಲಿಸಬಹುದು ಎಂದು ಅವರು ವಿವರಿಸಿದ್ದಾರೆ.
ಈ ಹಿಂದಿನ ಸುತ್ತುಗಳಲ್ಲಿ ದಾಖಲಿಸಿದ್ದ ಇಚ್ಛೆಗಳು ಈ ಸುತ್ತಿಗೆ ಇರುವುದಿಲ್ಲ. ಹೀಗಾಗಿ ಹೊಸದಾಗಿಯೇ ಆಪ್ಷನ್ಸ್ ದಾಖಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಫೆ.9ರಂದು ಸಂಜೆ 5 ಗಂಟೆಗೆ ಹಾಗೂ ಅಂತಿಮ ಫಲಿತಾಂಶವನ್ನು ಫೆ.10ರಂದು ಮಧ್ಯಾಹ್ನ 1 ಗಂಟೆ ನಂತರ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.
ಸೀಟು ಹಂಚಿಕೆಯಾದವರು ಫೆ.11ರಿಂದ 13ರವರೆಗೆ ಶುಲ್ಕ ಪಾವತಿಸಿ, ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಫೆ.13ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು. ಈ ದಿನಾಂಕಗಳು ಬದಲಾಗುವ ಸಾಧ್ಯತೆ ಕೂಡ ಇದ್ದು, ವಿವರಗಳಿಗೆ ಮೇಲಿಂದ ಮೇಲೆ ಕೆಇಎ ವೆಬ್‌ಸೈಟ್ ನೋಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.
PublicNext
02/02/2026 09:08 pm
LOADING...