ಶಿರಸಿ: ಮಾಚಿದೇವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ.ಸಮಾಜ ಸುಧಾರಕ ಮಾಚಿದೇ ಅವರ ತತ್ವಾದರ್ಶಗಳು ಇಂದಿನ ಆಧುನಿಕ ಪೀಳಿಗೆಗೆ ಮಾದರಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ನಗರದ ಶ್ರೀ ಮಾಚಿದೇವ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಾಚಿದೇವ ಜಯಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದ ಅಭಿವೃದ್ಧಿಯಲ್ಲಿ ಮಡಿವಾಳ ಸಮುದಾಯದ ಪಾತ್ರ ಹಿರಿದು ಎಂದು ಮೆಚ್ಚುಗೆ ಮಾತುಗಳನ್ನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಡಿವಾಳ ಸಮುದಾಯದ ಪ್ರತಿಭೆಗಳಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಭೂ ನ್ಯಾಯ ಮಂಡಳಿ ಸದಸ್ಯ ಎಸ್.ಕೆ.ಭಾಗ್ವತ್, ಮಡಿವಾಳ ಸಂಘದ ಜಿಲ್ಲಾಧ್ಯಕ್ಷ ಐ.ಜಿ.ಗಿಡ್ಡನ್, ತಾಲೂಕಾ ಅಧ್ಯಕ್ಷ ಜಿ.ವಿ. ಮಡಿವಾಳ ಇತರರು ಇದರು.
Kshetra Samachara
02/02/2026 09:31 pm
LOADING...