ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಧಗಧಗಿಸಿದ ಬೆಂಕಿ - ಪಶ್ಚಿಮ ಘಟ್ಟದ ಜೀವವೈವಿಧ್ಯಕ್ಕೆ ಕಾಡ್ಗಿಚ್ಚಿನ ಕಂಟಕ

ಮೂಡಿಗೆರೆ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಕೃತಿ ಸೌಂದರ್ಯದ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ​ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಈ ಪ್ರದೇಶದಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನಿಂದಾಗಿ ಪಶ್ಚಿಮ ಘಟ್ಟಗಳ ಸಾಲಿನ ಅತ್ಯಂತ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಬೆಂಕಿಗಾಹುತಿಯಾಗಿದೆ.

ಸದ್ಯ ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಣಕ್ಷಣಕ್ಕೂ ಕ್ಷಿಪ್ರವಾಗಿ ಹರಡುತ್ತಿದ್ದು, ಬೆಟ್ಟದ ಸಾಲುಗಳು ಧಗಧಗಿಸುತ್ತಿವೆ. ರಸ್ತೆಯ ಪಕ್ಕದ ಅರಣ್ಯದಲ್ಲೇ ಬೆಂಕಿ ಉರಿಯುತ್ತಿರುವುದರಿಂದ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಅರಣ್ಯಕ್ಕೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿ ನಿಯಂತ್ರಣಕ್ಕೆ ತರುವ ಕಾರ್ಯ ಪ್ರಗತಿಯಲ್ಲಿದೆ.

Edited By : Vinayak Patil
PublicNext

PublicNext

02/02/2026 10:01 pm

Cinque Terre

25.51 K

Cinque Terre

0

ಸಂಬಂಧಿತ ಸುದ್ದಿ