ಹುಬ್ಬಳ್ಳಿ: ಬೈಕ್ ಸವಾರನ ನಿಯಂತ್ರಣ ತಪ್ಪಿ BRTS ರಸ್ತೆ ಬದಿ ಡಿವೈಡರ್‌ಗೆ ಗುದ್ದಿದ ಪರಿಣಾಮ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಹುಬ್ಬಳಿಯ ಎಪಿಎಂಸಿ ಬಸ್ ನಿಲ್ದಾಣದ ಹತ್ತಿರ ಸಂಭವಿಸಿದೆ.
ಹೌದು, ಸ್ಥಳೀಯರ ಮಾಹಿತಿ ಪ್ರಕಾರ ಬೈಕ್ ಸವಾರ BRTS ರಸ್ತೆಯಲ್ಲಿ ಚಲಿಸುತ್ತಿದ್ದಾಗ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ ಸವಾರ, ಕಾರಿನ ಡಿಕ್ಕಿಯ ರಭಸಕ್ಕೆ ಸ್ಕಿಡ್ ಆಗಿ ಬಿದ್ದಿದ್ದು, ಬೈಕ್ ಪೆಟ್ರೋಲ್ ಕ್ಯಾಪ್ ಓಪನ್ ಆಗಿ ಬೆಂಕಿ ಕೂಡಾ ಕಾಣಿಸಿಕೊಂಡಿದೆ ಎನ್ನಲಾಗಿದೆ. ಇನ್ನು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬೈಕ್ ಸವಾರನನ್ನು ಸ್ಥಳೀಯರ ಸಹಾಯದಿಂದ ಕಿಮ್ಸ್ ಗೆ ದಾಖಲಿಸಿದ್ದಾರೆ.
-ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/02/2026 11:01 pm
LOADING...