ಬೆಂಗಳೂರು: ನಗರದ ಹೃದಯಭಾಗವಾದ ಮೆಜೆಸ್ಟಿಕ್‌ನಲ್ಲಿರುವ ಅಮರ್ ಹೋಟೆಲ್ ನವೀಕರಣ ಕಾಮಗಾರಿಗೆ ಅಳವಡಿಸಲಾಗಿದ್ದ ಸಾರುವಳಿ ಕುಸಿದು ಭಾರಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ರಸ್ತೆಯಲ್ಲಿ ನಿಂತಿದ್ದ ಮೂವರು ಗಾಯಗೊಂಡಿದ್ದು, ಹಲವು ವಾಹನಗಳು ಮತ್ತು ಅಂಗಡಿಗಳಿಗೆ ಹಾನಿಯಾಗಿದೆ. ಈ ಘಟನೆ ನಿನ್ನೆ ರಾತ್ರಿ ಸುಮಾರು 9:10ಕ್ಕೆ ನಡೆದಿದೆ.
ಹಾನಿ ಮತ್ತು ಆತಂಕದ ವಾತಾವರಣ
ಹೋಟೆಲ್ ನವೀಕರಣಕ್ಕಾಗಿ ಅಳವಡಿಸಲಾಗಿದ್ದ ಈ ಸಾರುವಳಿ, ಯಾವುದೇ ಮುನ್ಸೂಚನೆಯಿಲ್ಲದೆ ದಿಢೀರನೆ ಕುಸಿದಿದೆ. ಇದರ ಪರಿಣಾಮವಾಗಿ, ರಸ್ತೆಯಲ್ಲಿ ನಿಲ್ಲಿಸಿದ್ದ ಹಲವು ಬೈಕ್‌ಗಳು, ಸಮೀಪದ ಕೆಲವು ಅಂಗಡಿಗಳು ಹಾಗೂ ಎರಡು ಖಾಸಗಿ ಬಸ್‌ಗಳು ಜಖಂಗೊಂಡಿವೆ. ಬಸ್‌ಗಳ ಗಾಜುಗಳು ಸಂಪೂರ್ಣವಾಗಿ ಪುಡಿಪುಡಿಯಾಗಿವೆ. ಸಾರುವಳಿ ಕುಸಿದ ತಕ್ಷಣ, ಸ್ಥಳದಲ್ಲಿದ್ದ ಸಾರ್ವಜನಿಕರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಈ ಘಟನೆಯಿಂದಾಗಿ ಮೆಜೆಸ್ಟಿಕ್ ಸುತ್ತಮುತ್ತಲ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು.
ಪೊಲೀಸ್ ತನಿಖೆ
ಅವಘಡದ ಮಾಹಿತಿ ತಿಳಿಯುತ್ತಿದ್ದಂತೆ, ಉಪ್ಪಾರಪೇಟೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.
PublicNext
03/02/2026 08:03 am
LOADING...