ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಮಡಿವಾಳ ಮಾಚಿದೇವರ ಆದರ್ಶ ಸದಾ ನೆನಪಿರಲಿ - ಮಂಥರ್‌ಗೌಡ ಕಳಕಳಿ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಾ. ಮಂಥರ್‌ಗೌಡ, ಮಡಿವಾಳ ಮಾಚಿದೇವರು ಸೇರಿದಂತೆ ಹಲವು ಸಮಾಜ ಸುಧಾರಕರನ್ನು ಪ್ರತಿನಿತ್ಯ ಸ್ಮರಿಸುವಂತಾಗಬೇಕು ಎಂದು ಕರೆ ನೀಡಿದರು.

ಮಡಿವಾಳ ಮಾಚಿದೇವರ ತತ್ವ ಮತ್ತು ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿವೆ ಎಂದು ಅವರು ಪ್ರತಿಪಾದಿಸಿದರು. 12ನೇ ಶತಮಾನದಲ್ಲಿ ಸಮಾನತೆಗಾಗಿ ಬಸವಾದಿ ಶರಣರು ಸೇರಿದಂತೆ ಹಲವು ಮಹನೀಯರು ಶ್ರಮಿಸಿದ್ದಾರೆ. ಅವರ ಕೊಡುಗೆಗಳನ್ನು ಸದಾ ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಶಾಸಕರು ತಿಳಿಸಿದರು.

Edited By : PublicNext Desk
PublicNext

PublicNext

03/02/2026 09:40 am

Cinque Terre

5.71 K

Cinque Terre

0

ಸಂಬಂಧಿತ ಸುದ್ದಿ