ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅವರು ಮಾತನಾಡಿ, ಸಂಸ್ಕೃತಿ ಮತ್ತು ಸಂಸ್ಕಾರಗಳು ಒಂದಾದಾಗ ಮಾತ್ರ ಯಾವುದೇ ಜನಾಂಗ ಬೌದ್ಧಿಕ ಪ್ರಗತಿ ಸಾಧಿಸಲು ಸಾಧ್ಯ. ಹೀಗಾಗಿ, ಶೈಕ್ಷಣಿಕವಾಗಿ ಮುಂದುವರಿಯುವುದು ಪ್ರತಿಯೊಬ್ಬರ ಜೀವನ ಧರ್ಮವಾಗಬೇಕು ಎಂದು ಅಭಿಪ್ರಾಯಪಟ್ಟರು.
ಕೊಡವ ಸಂಸ್ಕೃತಿಯ ವೈಶಿಷ್ಟ್ಯ
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ನಾಲ್ನಾಡ್ ಪೂಮಲೆ ಕುಡಿಯ ಸಾಂಸ್ಕೃತಿಕ ಸಮಿತಿಯ ಸಹಯೋಗದಲ್ಲಿ ಯವಕಪಾಡಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ 'ಕುಡಿಯ ಸಾಂಸ್ಕೃತಿಕ ನಮ್ಮೆ-2026' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಧ್ಯಕ್ಷ ಮಹೇಶ್ ನಾಚಯ್ಯ ಮಾತನಾಡಿದರು. ಭಾರತ ದೇಶದಲ್ಲೇ ಕೊಡವ ಸಂಸ್ಕೃತಿ ವಿಶಿಷ್ಟ ಮತ್ತು ವಿಭಿನ್ನವಾಗಿರುವುದಕ್ಕೆ, ಈ ಜನಾಂಗವು ಎಲ್ಲ ಕ್ಷೇತ್ರಗಳಲ್ಲಿಯೂ ಮುಂದುವರೆದಿರುವುದೇ ಕಾರಣ ಎಂದು ಅವರು ವಿವರಿಸಿದರು.
ಕೊಡವ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪೋಷಿಸುತ್ತಿರುವ ಎಲ್ಲಾ 23 ಜನಾಂಗಗಳು ಇಂದು ಪ್ರಗತಿ ಸಾಧಿಸಿವೆ. ಇದಕ್ಕೆ ಕೊಡವ ಸಂಸ್ಕೃತಿಯನ್ನು ತಮ್ಮ ಜೀವನದ ಬೆಳಕಾಗಿ ಸ್ವೀಕರಿಸಿರುವುದು ಮತ್ತು ಉತ್ತಮ ಸಂಸ್ಕಾರವನ್ನು ರೂಢಿಸಿಕೊಂಡಿರುವುದೇ ಪ್ರಮುಖ ಕಾರಣ ಎಂದು ಅವರು ಒತ್ತಿ ಹೇಳಿದರು.
Kshetra Samachara
03/02/2026 09:43 am
LOADING...