ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ - ಆಸ್ಪತ್ರೆಗೆ ದಾಖಲು

ಸಾಗರ: ಐತಿಹಾಸಿಕ ಪ್ರಸಿದ್ಧ ಸಾಗರದ ಮಾರಿಕಾಂಬ ಜಾತ್ರೆ ಇಂದಿನಿಂದ ವಿಜೃಂಭಣೆಯಿಂದ ಆರಂಭಗೊಂಡಿದ್ದು, ಭಕ್ತಸಾಗರವೇ ಹರಿದುಬರುತ್ತಿದೆ. ಈ ಜಾತ್ರೆಯ ದರ್ಶನಕ್ಕೆ ಆಗಮಿಸಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಾರಿಕಾಂಬಾ ದೇವಿಯ ದರ್ಶನ ಪಡೆಯುವಾಗ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಎದುರಾಗಿದೆ.

ಆಸ್ಪತ್ರೆಗೆ ದಾಖಲು, ಆರೋಗ್ಯ ಸುಧಾರಣೆ

ತಕ್ಷಣವೇ ಅವರ ಪುತ್ರಿ ಕಾಗೋಡು ನಂದಿನಿ ಅವರು ಕಾಗೋಡು ತಿಮ್ಮಪ್ಪ ಅವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಕೆಲವು ಗಂಟೆಗಳ ನಂತರ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

Edited By : Manjunath H D
PublicNext

PublicNext

03/02/2026 12:23 pm

Cinque Terre

10.43 K

Cinque Terre

0

ಸಂಬಂಧಿತ ಸುದ್ದಿ