ಸಾಗರ: ಶಕ್ತಿದೇವತೆ ಶ್ರೀ ಮಾರಿಕಾಂಬೆ ಜಾತ್ರೆಗೆ ಇವತ್ತು ಅದ್ಧೂರಿಯಾಗಿ ಚಾಲನೆ ನೀಡಲಾಯಿತು. 9 ದಿನಗಳು ಜರುಗುವ ತಾಯಿಯ ಜಾತ್ರೆಗೆ, ಬೆಳಗ್ಗೆ ಬ್ರಾಹ್ಮೀ ಮಹೂರ್ತದಲ್ಲಿ ಸಾಂಪ್ರದಾಯಿಕ ವಿಧಿ ವಿಧಾನಗಳು ನಡೆಯಿತು. ಮೊದಲ ದಿನವೇ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು. ಬೆಳಗಿನ ಜಾವ 3 ಗಂಟೆಗೆ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ತಾಯಿ ಮಾರಿಕಾಂಬೆಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಿ ವಿಧಿವಿಧಾನ ನೆರವೇರಿಸಲಾಯಿತು.
ಮಂಗಳವಾದ್ಯಗಳೊಂದಿಗೆ ಸಾಗರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಬಂದ ದೇವಿಯ ಆಭರಣಗಳನ್ನು ತವರುಮನೆಗೆ ತರಲಾಯಿತು. ತವರುಮನೆಯಲ್ಲಿ ಪ್ರತಿಷ್ಠಾಪಿಸಿದ್ದ ನಯನ ಮನೋಹರವಾದ ಶ್ರೀ ಮಾರಿಕಾಂಬೆ ವಿಗ್ರಹಕ್ಕೆ ವಿವಿಧ ಸಾಂಪ್ರಾದಾಯಿಕ ಆಚರಣೆಗಳನ್ನು ನಡೆಸಿ ಆಭರಣಗಳನ್ನು ತೊಡಿಸಲಾಯಿತು. ತಾಯಿಯ ವಿಗ್ರಹಕ್ಕೆ ಭಾರಿ ಗಾತ್ರದ ಹಾರ ಸೇರಿದಂತೆ ವೈವಿಧ್ಯಮಯ ಹೂವಿನ ಅಲಂಕಾರ ನಡೆಸಿ ಮಹಾಮಂಗಳಾರತಿ ನೆರವೇರಿಸಲಾಯಿತು. ನಂತರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಕುಟುಂಬ ಸಮೇತ ದರ್ಶನ ಪಡೆದ ಬೇಳೂರು:
ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮೊದಲನೇ ದಿನದಂದೇ ಕುಟುಂಬ ಸಮೇತ ಆಗಮಿಸಿ ಗ್ರಾಮ ದೇವತೆಯ ದರ್ಶನ ಪಡೆದರು, ನಂತರ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ತಾವೇ ಸ್ವತಃ ದೇವಸ್ಥಾನದ ಸಮೀಪ ಇದು ವ್ಯವಸ್ಥೆಯನ್ನು ನೋಡಿಕೊಂಡರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದು ಹೀಗೆ....
ಜಮೀಲ್ ಸಾಗರ್ “ಪಬ್ಲಿಕ್ ನೆಕ್ಸ್ಟ್ ಸಾಗರ"
PublicNext
03/02/2026 01:55 pm
LOADING...