ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಕ್ಷಕನಿಂದಲೇ 6 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ - ಚಿತ್ರದುರ್ಗದ ಮಠದ ಶಾಲೆಗೆ ಕಳಂಕ!

ಚಿತ್ರದುರ್ಗದ ಪ್ರತಿಷ್ಠಿತ ಮಠಕ್ಕೆ ಸೇರಿದ ಖಾಸಗಿ ಶಾಲೆಯ ಶಿಕ್ಷಕನ ವಿರುದ್ಧ 6 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಭರಮಸಾಗರ ಗ್ರಾಮದ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕ ರಂಗಣ್ಣ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಆರು ಮಂದಿ ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಗೆ ಕರೆದು ಈ ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಶಾಲಾ ಆಡಳಿತ ಸಮಿತಿಯು ಭರಮಸಾಗರ ಪೊಲೀಸ್ ಠಾಣೆಗೆ ದೂರು ನೀಡಿದೆ.

ದೂರು ದಾಖಲಿಸಿಕೊಂಡ ಪೊಲೀಸರು, ಆರೋಪಿ ಶಿಕ್ಷಕ ರಂಗಣ್ಣನನ್ನು ವಶಕ್ಕೆ ಪಡೆದಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Edited By : Abhishek Kamoji
Kshetra Samachara

Kshetra Samachara

03/02/2026 03:05 pm

Cinque Terre

2.5 K

Cinque Terre

0

ಸಂಬಂಧಿತ ಸುದ್ದಿ