ಹಾಸನ : ರಸ್ತೆ ಬದಿಯ ಅಕ್ರಮ ಆಕ್ರಮಣ ಹಾಗೂ ಅನಧಿಕೃತ ಗೂಡಂಗಡಿಗಳ ವಿರುದ್ಧ ಮಹಾನಗರ ಪಾಲಿಕೆಯ ಅಧಿಕಾರಿಗಳು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದರು. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಮತ್ತು ನೈರ್ಮಲ್ಯಕ್ಕೆ ಧಕ್ಕೆ ತರುತ್ತಿದ್ದ ಜಾಗಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಸಂಬಂಧಪಟ್ಟವರಿಗೆ ಎಚ್ಚರಿಕೆ ನೀಡಿದರು.
ಕಾರ್ಯಾಚರಣೆಯ ವೇಳೆ ಅಧಿಕಾರಿಗಳು ಚರಂಡಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಡ್ರೈನ್ ಮೇಲೆಯೇ ಮೆಟ್ಟಿಲುಗಳನ್ನು ಕಟ್ಟಿ ಚರಂಡಿ ಹರಿವಿಗೆ ಅಡ್ಡಿಪಡಿಸಿರುವುದು ಕಂಡುಬಂದಿದೆ ಇದರಿಂದಾಗಿ ನೀರು ಸರಾಗವಾಗಿ ಹರಿಯದೆ 'ಗ್ರಾವಿಟಿ' ಸಮಸ್ಯೆ ಉಂಟಾಗುತ್ತಿದೆ ಎಂದು ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.
ವರ್ತಕರು ಮತ್ತು ಗೂಡಂಗಡಿ ಮಾಲೀಕರಿಗೆ ಸ್ವಯಂ ಪ್ರೇರಿತವಾಗಿ ಜಾಗ ಖಾಲಿ ಮಾಡಲು ಸೋಮವಾರದವರೆಗೆ ಕಾಲಾವಕಾಶ ನೀಡಲಾಗಿದೆ. ಸೋಮವಾರದ ಒಳಗೆ ವ್ಯವಸ್ಥಿತವಾಗಿ ಬದಲಾವಣೆ ಮಾಡಿಕೊಳ್ಳದಿದ್ದರೆ ಪಾಲಿಕೆಯೇ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
PublicNext
03/02/2026 03:22 pm
LOADING...