ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ನಿರಂತರ ಪ್ರಯತ್ನ: ಡಾ.ಈಶ್ವರ ಉಳ್ಳಾಗಡ್ಡಿ

ಧಾರವಾಡ: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ವಿವಿಧ ಯೋಜನೆಗಳನ್ನು ರೂಪಿಸಿ, ಅಗತ್ಯ ಸಿದ್ಧತೆಯನ್ನು ಇಲಾಖೆಯಿಂದ ನಿರಂತರವಾಗಿ ಪ್ರಯತ್ನ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆರಂಭದಲ್ಲಿ ಸೇತುಬಂಧ ಪರೀಕ್ಷೆ ನಡೆಸಲಾಗಿದೆ. ಅದರಂತೆಯೇ 29 ಅಂಶಗಳ ಕಾರ್ಯಕ್ರಮ, ಮಿಷನ್ 40 ಪ್ಲಸ್ ವಿಶೇಷ ತರಗತಿ ಹಾಗೂ ಮಾದರಿ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

ಇನ್ನೂ ನೂರುಕ್ಕೆ ನೂರರಷ್ಟು ಫಲಿತಾಂಶ ಸುಧಾರಣೆಗೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ. ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ, ವಿಶೇಷ ಕಾರ್ಯಕ್ರಮ ಮೂಲಕ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಲಾಗಿದೆ ಎಂದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/02/2026 04:46 pm

Cinque Terre

29.25 K

Cinque Terre

0

ಸಂಬಂಧಿತ ಸುದ್ದಿ