ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಪ್ರಯಾಣಿಕರಿಗೆ ಸಿಹಿ ಸುದ್ದಿ - ಶಿವರಾತ್ರಿಗೆ ಯಶವಂತಪುರ - ಮಡಗಾಂವ್ ವಿಶೇಷ ರೈಲು !

ಉಡುಪಿ : ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಆರಂಭಿಸಲಾಗಿದ್ದ ಕೆಲವು ವಿಶೇಷ ರೈಲುಗಳ ಸೇವೆಯನ್ನು ರೈಲ್ವೆ ಇಲಾಖೆ ವಿಸ್ತರಿಸಿದೆ. ಈ ವಿಶೇಷ ರೈಲುಗಳು ಇನ್ನು ಕೆಲಕಾಲ ಪ್ರಯಾಣಿಕರಿಗೆ ಲಭ್ಯವಿರಲಿದ್ದು, ಇದರಿಂದ ಸಾವಿರಾರು ಮಂದಿಗೆ ಅನುಕೂಲವಾಗಲಿದೆ.

ಸೂರತ್ ಸ್ಪೆಷಲ್ ಎಕ್ಸ್‌ಪ್ರೆಸ್ ವಿಸ್ತರಣೆ

ಬುಧವಾರ ಮತ್ತು ರವಿವಾರ ಸೂರತ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ಸೂರತ್ ಸ್ಪೆಷಲ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 09057) ಸೇವೆಯನ್ನು ಫೆಬ್ರವರಿ 25ರ ವರೆಗೆ ವಿಸ್ತರಿಸಲಾಗಿದೆ. ಈ ರೈಲು ಸೂರತ್‌ನಿಂದ ಸಂಜೆ 7.35ಕ್ಕೆ ಹೊರಡಲಿದೆ. ಅದೇ ರೀತಿ, ಗುರುವಾರ ಮತ್ತು ಸೋಮವಾರ ಸೂರತ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ಸೂರತ್ ಸ್ಪೆಷಲ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 09058) ಸೇವೆಯನ್ನು ಫೆಬ್ರವರಿ 26ರ ವರೆಗೆ ವಿಸ್ತರಿಸಲಾಗಿದ್ದು, ಇದು ಮಂಗಳೂರಿನಿಂದ ರಾತ್ರಿ 10.30ಕ್ಕೆ ಹೊರಡಲಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

ಮಹಾ ಶಿವರಾತ್ರಿ ವಿಶೇಷ ರೈಲು

ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಯಶವಂತಪುರ ಮತ್ತು ಮಡಗಾಂವ್ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 06507 / 06508) ಸಂಚಾರ ನಡೆಸಲಿದೆ.

ಯಶವಂತಪುರ ಎಕ್ಸ್‌ಪ್ರೆಸ್ ವೇಳಾಪಟ್ಟಿ

ರೈಲು ಸಂಖ್ಯೆ 06507 ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಫೆಬ್ರವರಿ 13ರಂದು ಮಧ್ಯಾಹ್ನ 12.30ಕ್ಕೆ ಯಶವಂತಪುರದಿಂದ ಹೊರಟು, ಫೆಬ್ರವರಿ 14ರಂದು ಬೆಳಗ್ಗೆ 6.45ಕ್ಕೆ ಮಡಗಾಂವ್ ಜಂಕ್ಷನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 06508 ಯಶವಂತಪುರ ಎಕ್ಸ್‌ಪ್ರೆಸ್ ರೈಲು ಫೆಬ್ರವರಿ 16ರಂದು ಬೆಳಗ್ಗೆ 11ಕ್ಕೆ ಮಡಗಾಂವ್ ಜಂಕ್ಷನ್‌ನಿಂದ ಹೊರಟು, ಫೆಬ್ರವರಿ 17ರಂದು ಬೆಳಗ್ಗೆ 4.45ಕ್ಕೆ ಯಶವಂತಪುರ ತಲುಪಲಿದೆ.

ನಿಲುಗಡೆಗಳು

ಈ ವಿಶೇಷ ರೈಲು ಸುಬ್ರಹ್ಮಣ್ಯ ರಸ್ತೆ, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರಸ್ತೆ ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರಸ್ತೆ, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ.

Edited By : PublicNext Desk
PublicNext

PublicNext

03/02/2026 04:48 pm

Cinque Terre

5.37 K

Cinque Terre

0

ಸಂಬಂಧಿತ ಸುದ್ದಿ