ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ದೇಶಾದ್ಯಂತ ಆಯೋಜಿಸಿರುವ ಸಂಸದರ ಕ್ರೀಡಾ ಮಹೋತ್ಸವವು ಗ್ರಾಮೀಣ ಭಾಗದ ಯುವಕರಲ್ಲಿ ಹೊಸ ಹುರುಪು ಮೂಡಿಸಿದೆ. ಕ್ರೀಡಾ ಸ್ಪರ್ಧೆಗಳ ಮೂಲಕ ಹಳ್ಳಿ ಮಟ್ಟದ ಪ್ರತಿಭೆಗಳನ್ನು ಗುರುತಿಸಿ ಉತ್ತೇಜಿಸುವ ಮಹತ್ವದ ಉದ್ದೇಶವನ್ನು ಈ ಮಹೋತ್ಸವ ಹೊಂದಿದೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಯೋಜಿಸಿರುವ ಈ ಕ್ರೀಡಾ ಮಹೋತ್ಸವಕ್ಕೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯುವ ನಾಯಕ ನಂದೀಶ್ ಗುಂಡೂರ ಅವರ ನೇತೃತ್ವದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಲು ಹೆಚ್ಚಿನ ಸಂಖ್ಯೆಯ ಯುವಕರು ನೋಂದಣಿ ಮಾಡಿಕೊಂಡಿದ್ದಾರೆ.
ನಗರದ ಬೈರಿದೇವರಕೊಪ್ಪ ಭಾಗದ ಕ್ರೀಡಾಪಟುಗಳು, "ನಮಗೂ ಒಂದು ಉತ್ತಮ ವೇದಿಕೆ ಸಿಕ್ಕಂತಾಗಿದೆ. ಕ್ರೀಡೆಯ ಮೂಲಕ ನಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ದೊರೆತಿರುವುದು ಸಂತಸ ತಂದಿದೆ. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು" ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/02/2026 05:04 pm
LOADING...