ಮುಂಡಗೋಡ : ಪಿಎಸ್‌ಐ ಯಲ್ಲಾಲಿಂಗ್ ಕುನ್ನೂರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರಿಗೆ 33 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಯಲ್ಲಾಪುರ ಪೊಲೀಸ್ ಠಾಣೆ ಹಾಗೂ ಮುಂಡಗೋಡದಲ್ಲಿ ಪಿಎಸ್‌ಐ ಆಗಿ ಸೇವೆ ಸಲ್ಲಿಸಿದ್ದ ಯಲ್ಲಾಲಿಂಗ್ ಕುನ್ನೂರು ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಹಲವು ಮುಖಂಡರು ಕಂಬನಿ ಮಿಡಿದಿದ್ದಾರೆ.
PublicNext
03/02/2026 05:10 pm
LOADING...