ಚಿಕ್ಕಮಗಳೂರು : ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎಚ್.ಪಿ. ಮಂಜೇಗೌಡ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಜ್ಯ ಸರ್ಕಾರವು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ನಯಾಜ್ ಅವರ ಬದಲಿಗೆ ಮಂಜೇಗೌಡ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದೆ.
ಪ್ರಸ್ತುತ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಮಂಜೇಗೌಡ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ತಮ್ಮಯ್ಯ ಅವರ ಅಭೂತಪೂರ್ವ ಗೆಲುವಿನ ಹಿಂದೆ ಪ್ರಮುಖ ಸಂಘಟನಾ ಶಕ್ತಿಯಾಗಿ ಗುರುತಿಸಿಕೊಂಡಿದ್ದರು. ಪಕ್ಷಕ್ಕೆ ಅವರು ನೀಡಿದ ನಿರಂತರ ಸೇವೆ ಮತ್ತು ಸಂಘಟನಾ ಚತುರತೆಯನ್ನು ಪರಿಗಣಿಸಿ ಸರ್ಕಾರವು ಈ ಮಹತ್ವದ ಜವಾಬ್ದಾರಿಯನ್ನು ಅವರಿಗೆ ನೀಡಿದೆ.
PublicNext
03/02/2026 05:39 pm
LOADING...