ಶಿವಮೊಗ್ಗ : ಹೊಳಲೂರು ಗ್ರಾಮದ ಹರಮಘಟ್ಟ ಕ್ರಾಸ್ ಬಳಿ ಟ್ರಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರುದ್ರಪ್ಪ, ತಮ್ಮ ಹೆಂಡತಿ ರೇಣುಕಮ್ಮ ಮತ್ತು ಸೊಸೆ ಅಕ್ಷತಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಹೊಳಲೂರು ಕಡೆಯಿಂದ ಬರುತ್ತಿದ್ದರು. ಈ ವೇಳೆ ಹರಮಘಟ್ಟ ಕ್ರಾಸ್ ಬಳಿ ಎದುರಿನಿಂದ ಬಂದ ಟ್ರಾಕ್ಟರ್ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಮೂವರೂ ರಸ್ತೆಗೆ ಬಿದ್ದು ಕೈಕಾಲು ಮತ್ತು ಮುಖಕ್ಕೆ ತೀವ್ರ ಸ್ವರೂಪದ ಗಾಯವಾಗಿದೆ. ಗಾಯಾಳುಗಳನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸೊಸೆ ಅಕ್ಷತಾ ಅವರನ್ನು ಖಾಸಗಿ ಆಸ್ಪತ್ರೆಯ ಐಸಿಯು ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಟ್ರಾಕ್ಟರ್ ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
03/02/2026 06:19 pm
LOADING...