ಶಿವಮೊಗ್ಗ : ಜಿಲ್ಲೆಯಾದ್ಯಂತ ಫೆಬ್ರವರಿ 10 ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನವನ್ನು 1 ರಿಂದ 19 ವರ್ಷದ ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡುವ ಮೂಲಕ ಆಚರಿಸಲಾಗುತ್ತಿದ್ದು ಜಿಲ್ಲೆಯ ಎಲ್ಲ ಅರ್ಹ ಮಕ್ಕಳಿಗೆ ಈ ಮಾತ್ರೆಗಳನ್ನು ಕಡ್ಡಾಯವಾಗಿ ನೀಡಬೇಕೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಂತು ಹುಳು ಇರುವ ಮಕ್ಕಳು ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಾರೆ. ಅದರಿಂದ ಅವರ ದೈಹಿಕ, ಮಾನಸಿಕ ಬೆಳವಣಿಗೆ ಕುಂಠಿತವಾಗುವುದರೊಂದಿಗೆ ಶೈಕ್ಷಣಿಕ ಬೆಳವಣಿಗೆ ಸಹ ಕಡಿಮೆಯಾಗುವ ಕಾರಣದಿಂದ ಎಲ್ಲ 1 ರಿಂದ 19 ವರ್ಷದ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆಗಳನ್ನು ತೆಗೆದುಕೊಳ್ಳಬೇಕು.
PublicNext
03/02/2026 07:05 pm
LOADING...