ಚಾಮರಾಜನಗರ : ಕೊಳ್ಳೇಗಾಲ ಪಟ್ಟಣದಲ್ಲಿ ಐತಿಹಾಸಿಕ ಶ್ರೀಲಕ್ಷ್ಮೀನಾರಾಯಣಸ್ವಾಮಿ ರಥೋತ್ಸವವು ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಪಟ್ಟಣದ ಕಾವೇರಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೀನಾ ಲಗ್ನದಲ್ಲಿ ಬೆಳಗ್ಗೆ 11 ಗಂಟೆಯಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ರಥ ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ನೆರೆದಿದ್ದ ಭಕ್ತರು ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ನಾರಾಯಣ... ನಾರಾಯಣ ಎಂಬ ಝೇಂಕಾರದೊಂದಿಗೆ ಭಕ್ತರು ರಥವನ್ನು ಎಳೆದರು. ರಥೋತ್ಸವದಲ್ಲಿ ಭಕ್ತರು ಹಣ್ಣು ಧವನಗಳನ್ನು ತೇರಿಗೆ ಎಸೆಯುವ ಮೂಲಕ ತಮ್ಮ ಹರಕೆಗಳನ್ನು ತೀರಿಸಿದರು.
ಶ್ರೀಲಕ್ಷ್ಮೀನಾರಾಯಣಸ್ವಾಮಿ ರಥೋತ್ಸವ ಹಿನ್ನೆಲೆಯಲ್ಲಿ ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕರಾದ ಶೇಷಾದ್ರಿ ಭಟ್ಟರು, ಸುದರ್ಶನ್, ವೀರಾಂಜನೇಯಸ್ವಾಮಿ ದೇವಸ್ಥಾನದ ಅರ್ಚಕ ಟಿ.ವಿ.ಎಸ್.ರಾಘವನ್, ನಂದಕುಮಾರ್ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ.ಎನ್.ನಂಜುಂಡಸ್ವಾಮಿ, ಎಸ್.ಬಾಲರಾಜ್, ಎನ್.ಮಹೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಎಎಸ್ಪಿ ಶಶಿಧರ್, ತಹಸೀಲ್ದಾರ್ ಬಸವರಾಜು, ನಗರಸಭೆ ಪೌರಾಯುಕ್ತ ರುದ್ರಮ್ಮ ಶರಣಯ್ಯ ಸೇರಿದಂತೆ ಇತರರು ಇದ್ದರು.
Kshetra Samachara
03/02/2026 07:08 pm
LOADING...