ಕಳಸ: ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದಂತೆ ರೈತ ಮುಖಂಡರೊಂದಿಗೆ ತಾಲೂಕು ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹತ್ವದ ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡು ಮುಂಬರುವ ಮೂರು ವರ್ಷಗಳ ಅವಧಿಯ ಬೆಳೆ ವಿಮೆಯ ಕುರಿತು ರೈತರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ವಿಮಾ ಪ್ರಕ್ರಿಯೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆಯ ನಿಯಮಗಳ ಬಗ್ಗೆ ರೈತರಿಗೆ ಸವಿಸ್ತಾರವಾದ ಅರಿವು ಮೂಡಿಸಲಾಯಿತು. ಈ ಹಿಂದೆ ಇಂತಹ ವಿಷಯಗಳ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ಲಭ್ಯವಿರುತ್ತಿರಲಿಲ್ಲ. ಆದರೆ ಈ ಸಭೆಯ ಮೂಲಕ ರೈತರ ನೇರ ಸಲಹೆಗಳನ್ನು ಪಡೆದು ಅವುಗಳನ್ನು ವಿಮಾ ಯೋಜನೆಯ ಟರ್ಮ್ ಶೀಟ್‌ನಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ.
ರೈತರು ನೀಡಿದ ಪ್ರಮುಖ ಸೂಚನೆಗಳನ್ನು ದಾಖಲಿಸಿಕೊಂಡು ಅವುಗಳನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯುವ ಮುಂದಿನ ಸಭೆಯಲ್ಲಿ ಮಂಡಿಸಿ ನಂತರ ಅಂತಿಮ ಅನುಮೋದನೆಗಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಕಳೆದ ಸಾಲಿನ ವಿಮಾ ಹಣ ಪಾವತಿಯಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಯಿತು.
PublicNext
03/02/2026 07:41 pm
LOADING...