ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಹಿಂಬದಿಯಿಂದ ಬಂದು ಕಾರಿಗೆ ಗುದ್ದಿದ್ದ ಮತ್ತೊಂದು ಕಾರು, ಮಹಿಳೆ ಸಾವು

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದಂಪತಿಗಳಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಬಲಭಾಗದಲ್ಲಿ ನಿಂತಿದ್ದ ಕಾರಿಗೆ ಹಿಂಬದಿಯಿಂದ ಅದರಲ್ಲೂ ಅತೀ ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ತಲೆಗೆ ಪೆಟ್ಟು ಬಿದ್ದಿದ್ದ ಮಲ್ಲಿಕಾ ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮಲ್ಲಿಕಾ ದಂಪತಿಗಳು ಮಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಸಾಗರಕ್ಕೆ ತಲುಪಬೇಕಿತ್ತು. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Edited By :
PublicNext

PublicNext

03/02/2026 08:08 pm

Cinque Terre

5.95 K

Cinque Terre

0

ಸಂಬಂಧಿತ ಸುದ್ದಿ