ಹಾಸನ : ಜಿಲ್ಲೆಯ ಬಿಜಿಎಸ್ ಮಠದಲ್ಲಿ ಅತ್ಯಂತ ಭಕ್ತಿ ಭಾವ ಹಾಗೂ ವಿಜೃಂಭಣೆಯಿಂದ 137ನೇ ಹುಣ್ಣಿಮೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಪವಿತ್ರ ಧಾರ್ಮಿಕ ಸಮಾರಂಭಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಚಾಲನೆ ನೀಡಿದರು.
ಹುಣ್ಣಿಮೆಯ ಅಂಗವಾಗಿ ಮಠದಲ್ಲಿ ಗುರುತೋಲಿವ ದಾಳಿ, ತೀರ್ಥ ಪ್ರಸಾದ ವಿತರಣೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಶಿಸ್ತುಬದ್ಧವಾಗಿ ಜರುಗಿದವು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀಗಳ ಆಶೀರ್ವಾದ ಪಡೆದರು.
Kshetra Samachara
03/02/2026 08:27 pm
LOADING...