ಹುಬ್ಬಳ್ಳಿ : ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿ, ಖಾಸಗಿ ವೀಡಿಯೊ ಮೂಲಕ ಬ್ಲಾಕ್‌ಮೇಲ್ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗೋವಾ ಮೂಲದ ಯುವಕನ ವಿರುದ್ಧ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
2022ರಲ್ಲಿ ನೊಂದ ಬಾಲಕಿ ತನ್ನ ಪೋಷಕರೊಂದಿಗೆ ಗೋವಾಕ್ಕೆ ಹೌಸ್‌ಕೀಪಿಂಗ್ ಕೆಲಸಕ್ಕೆ ತೆರಳಿದ್ದ ವೇಳೆ, ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಆರೋಪಿಯು ಪರಿಚಯ ಬೆಳೆಸಿಕೊಂಡಿದ್ದನು. ನಂತರ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿದ್ದು, ನಿರಾಕರಿಸಿದ ಹಿನ್ನೆಲೆ ಖಾಸಗಿ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬ್ಲ್ಯಾಕ್ಮೇಲ್ ಮೂಲಕ ಹಲವು ರೀತಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದು, ಬಳಿಕ ಕುಟುಂಬ ಗೋವಾವನ್ನು ಬಿಟ್ಟು ಕರ್ನಾಟಕಕ್ಕೆ ಮರಳಿದರೂ ಆರೋಪಿ ಹಿಂಬಾಲಿಸುತ್ತಿದ್ದನೆಂದು ಹೇಳಲಾಗಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಅಪ್ರಾಪ್ತೆ ಜೊತೆ ಕಿಸ್ ಮಾಡಿದ್ದ ಫೋಟೋ ಅಪ್ಲೋಡ್ ಮಾಡಿದ ಹಿನ್ನೆಲೆಯಲ್ಲಿ ಬಾಲಕಿ ಪೊಲೀಸರ ಮೊರೆ ಹೋಗಿದ್ದಾಳೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ನವನಗರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬ್ಯೂರೋ ರಿಪೋರ್ಟ್ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/02/2026 08:27 pm
LOADING...