ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ಶ್ರೀ ಸಕಲೇಶ್ವರ ಸ್ವಾಮಿ ರಥೋತ್ಸವ ಸಂಭ್ರಮ - ರಥ ಎಳೆದು ಭಕ್ತಿ ಮೆರೆದ ಜಿಲ್ಲಾಧಿಕಾರಿ ಲತಾ ಕುಮಾರಿ

ಸಕಲೇಶಪುರ : ತಾಲ್ಲೂಕಿನ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಸಕಲೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಈ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಪಾಲ್ಗೊಂಡು, ರಥ ಎಳೆಯುವ ಮೂಲಕ ಗಮನ ಸೆಳೆದರು.

ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ಸಾಂಗವಾಗಿ ನೆರವೇರಿದವು. ನಂತರ ನಡೆದ ರಥಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದ ಜಿಲ್ಲಾಧಿಕಾರಿಗಳು, ಮಲೆನಾಡಿನ ಆರಾಧ್ಯ ದೈವ ಸಕಲೇಶ್ವರ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಾವಿರಾರು ಭಕ್ತರೊಂದಿಗೆ ಸೇರಿ ರಥದ ಹಗ್ಗ ಹಿಡಿದು ಎಳೆಯುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.

Edited By : PublicNext Desk
PublicNext

PublicNext

03/02/2026 08:29 pm

Cinque Terre

6.65 K

Cinque Terre

0

ಸಂಬಂಧಿತ ಸುದ್ದಿ