ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ವಾಕಿಂಗ್ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

ಬೈಂದೂರು: ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಸಣ್ಣಕುಂಬ್ರಿ ಎಂಬಲ್ಲಿ ವಾಕಿಂಗ್‌ಗೆ ತೆರಳಿದ್ದ ವೇಳೆ ವೃದ್ಧೆಯೊಬ್ಬರ ಕುತ್ತಿಗೆಯಿಂದ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ಸರವನ್ನು ಬಲಾತ್ಕಾರವಾಗಿ ಎಳೆದುಕೊಂಡು ಪರಾರಿಯಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ತ್ರಾಸಿಯ ಸಣ್ಣಕುಂಬ್ರಿ ಡೋನ್ ಬೋಸ್ಕೋ ಶಾಲೆ ರಸ್ತೆಯಲ್ಲಿ ವಾಕಿಂಗ್‌ಗೆ ತೆರಳಿದ್ದ ಸೀತಾ (83) ಎಂಬ ವೃದ್ಧೆಯ ಬಳಿ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ ಹಾಕಿ ಕುತ್ತಿಗೆಯಲ್ಲಿದ್ದ ಸುಮಾರು 22.470 ಗ್ರಾಂ ತೂಕದ, ಅಂದಾಜು 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾನೆ.

ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಗಂಗೊಳ್ಳಿ ಪೊಲೀಸ್ ಠಾಣೆಗೆ ಹಿರಿಯ ಪೊಲೀಸ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ

Edited By : PublicNext Desk
Kshetra Samachara

Kshetra Samachara

03/02/2026 08:59 pm

Cinque Terre

272

Cinque Terre

0

ಸಂಬಂಧಿತ ಸುದ್ದಿ