ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಿಂದ ಹೊಲಿಗೆ ತರಬೇತಿ ಕಾರ್ಯಕ್ರಮ

ಕಲಬುರಗಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಕಾರ್ಯಕ್ರಮದಡಿ ಕಲಬುರಗಿ ಜಿಲ್ಲೆಯ ವಿಜಯಪುರದ ಇಂಡಿ ಲಚ್ಯಾಣದ ಬೀರಲಿಂಗೇಶ್ವರ ಸಭಾಭವನ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಂಗಳವಾರ ನೆರವೇರಿತು.

ಅರಣ್ಯಾಧಿಕಾರಿ ಧನರಾಜ್ ಮುಜಗೊಂಡ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಅತಿ ದೊಡ್ಡ ಸಂಸ್ಥೆ ಅದು ಧರ್ಮಸ್ಥಳ ಸಂಸ್ಥೆ ಆಗಿದ್ದು ಪೂಜ್ಯರ ಕಾರ್ಯಕ್ರಮಗಳು ಒಂದು ಸರ್ಕಾರ ಮಾಡದ ಕಾರ್ಯಕ್ರಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪಂಚಾಯಿತಿ ಸದಸ್ಯ ರಾಜೇಸಾಬ ನದಾಪ್ ಗ್ರಾಮ ಮಾತನಾಡಿ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸಮಾಜಮುಖಿ ಕಾರ್ಯಕ್ರಮದಿಂದ ನಮ್ಮ ಗ್ರಾಮದಲ್ಲಿ ಹಲವಾರು ಕಾರ್ಯಕ್ರಮ ಮಾಡಲಾಗಿದೆ. ಈ ಮೂಲಕ ಮಹಿಳಾ ಸಬಲೀಕರಣ ಮಾಡಲಾಗುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಆರ್ಥಿಕ ಸಾಮಾಜಿಕ ಬದಲಾವಣೆ ಮಾಡುತ್ತಿದೆ ಎಂದರು.

ಯೋಜನಾಧಿಕಾರಿ ನಟರಾಜ ಎಲ್.ಎಂ. ಮಾತನಾಡಿ, ಯೋಜನೆಯ ಹುಟ್ಟು ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆಯಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಜನೆ ಪ್ರಾರಂಭ ಮಾಡಿದ ಮೂಲ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಇಂಡಿ ತಾಲೂಕಿನಲ್ಲಿ ಕಳೆದ 10 ವರ್ಷದಿಂದ ಮಾಡುತ್ತಿರುವ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ನಮ್ಮ ಸಂಸ್ಥೆ ಸಾಲ ನೀಡುವ ಸಂಸ್ಥೆಯಲ್ಲ ಜೊತೆಗೆ ಹಲವಾರು ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ. ನಿರ್ಗತಿಕರ ಮಾಸಾಸನ ಸುಜ್ಞಾನನಿಧಿ ಶಿಷ್ಯವೇತನ ವಿತರಣೆ ಶುದ್ಧಗಂಗಾ ಘಟಕ ವಾತ್ಸಲ್ಯ ಮನೆ ರಚನೆ, ಮದ್ಯವರ್ಜನ ಶಿಬಿರ, ಧಾರ್ಮಿಕ ಕಾರ್ಯಕ್ರಮ ಇತ್ಯಾದಿ ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳು ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ವಾಲಿ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

03/02/2026 09:47 pm

Cinque Terre

60

Cinque Terre

0