ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಭೀಕರ ಅಪಘಾತ ಮೂವರ ದುರ್ಮರಣ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಾರೂಗೇರಿ ಪಟ್ಟಣದ ಅಥಣಿ-ಗೋಕಾಕ ರಸ್ತೆ ಮೇಲೆ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಮೂವರು ಯುವಕರು ದುರ್ಮರಣ ಹೊಂದಿದ್ದಾರೆ.

ಗಜಾನನ ಮಹಾದೇವ ವಡೆಯರ್, ಮಾಳಪ್ಪ ಮಲ್ಲಪ್ಪ ಗೋಲಭಾಂವಿ ಹಾಗೂ ಮಹಾದೇವ ಮಲ್ಲಪ್ಪ ಗೋಲಭಾಂವಿ ಮೃತ ಬೈಕ್ ಸವಾರರು. ಅಪರಿಚಿತ ವಾಹನ ಚಾಲಕ ಅಪಘಾತ ಮಾಡಿ ಸ್ಥಳದಲ್ಲಿ ತನ್ನ ವಾಹನವನ್ನು ನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 46/2026 ಕಲಂ 281, 106(1) ಬಿ.ಎನ್.ಎಸ್ ಮತ್ತು ಕಲಂ 134 ಸಹ ಕಲಂ 187 ಎಮ್.ವಿ ಆಕ್ಟ್ ಅಡಿಯಲ್ಲಿ ಕೇಸು ದಾಖಲಾಗಿದ್ದು, ಅಪಘಾತ ಮಾಡಿ ಎಸ್ಕೇಪ್ ಆಗಿರುವ ವಾಹನದ ಪತ್ತೆಗೆ ಬೆಳಗಾವಿ ಪೊಲೀಸ್ ತಂಡ ರಚನೆ ಮಾಡಿದ್ದಾರೆ.

Edited By : Vinayak Patil
PublicNext

PublicNext

03/02/2026 09:50 pm

Cinque Terre

6.71 K

Cinque Terre

0

ಸಂಬಂಧಿತ ಸುದ್ದಿ