ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಪ್ರತಿಷ್ಟಿತ ಮಠದ ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿಕ್ಷಕನ ಮೇಲೆ POCSO ಕೇಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಮಠವೊಂದರ ಖಾಸಗಿ ಶಾಲೆಯಲ್ಲಿ, ವಿದ್ಯಾರ್ಥಿನಿಯರಿಗೆ ಪಾಠ ಹೇಳಿಕೊಡಬೇಕಾದ ಶಿಕ್ಷಕನೊಬ್ಬ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪೋಷಕರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ವಿದ್ಯಾಬುದ್ಧಿ ಕಲಿಸಬೇಕಾದ ಶಿಕ್ಷಕನೇ ಕಾಮಪಿಶಾಚಿಯಂತೆ ವರ್ತಿಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದು ಸಮುದಾಯವನ್ನು ಬೆಚ್ಚಿಬೀಳಿಸಿದೆ.

ದೂರಿನ ಪ್ರಕಾರ, ಆರೋಪಿ ಶಿಕ್ಷಕ ರಂಗಣ್ಣ ಸುಮಾರು ಆರು ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವಿಷಯ ತಿಳಿದ ತಕ್ಷಣ ಆಘಾತಕ್ಕೊಳಗಾದ ಶಾಲಾ ಆಡಳಿತ ಮಂಡಳಿಯು ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕೂಡಲೇ ಕಾನೂನು ಕ್ರಮಕ್ಕೆ ಮುಂದಾಗಿದೆ.

ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಶಾಲೆಯ ಆಡಳಿತ ಸಮಿತಿಯೇ ಭರಮಸಾಗರ ಪೊಲೀಸ್ ಠಾಣೆಗೆ ತೆರಳಿ ಶಿಕ್ಷಕ ರಂಗಣ್ಣನ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದೆ. ದೂರು ದಾಖಲಾದ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತ ಶಿಕ್ಷಕ ರಂಗಣ್ಣನ ವಿರುದ್ಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪ್ರತಿಷ್ಠಿತ ಶಾಲೆಯಲ್ಲೇ ಇಂತಹ ಘಟನೆ ನಡೆದಿರುವುದು ಚಿತ್ರದುರ್ಗದ ಜನರನ್ನು ಬೆಚ್ಚಿಬೀಳಿಸಿದೆ. ಒಂದು ಕಾಲದಲ್ಲಿ ಮಕ್ಕಳು ಶಾಲೆಗೆ ಹೋದರೆ ಸುರಕ್ಷಿತವಾಗಿರುತ್ತಾರೆ ಎಂಬ ನಂಬಿಕೆ ಇತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಶಿಕ್ಷಕರೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಪೈಶಾಚಿಕ ಕೃತ್ಯಗಳು ಹೆಚ್ಚಾಗುತ್ತಿರುವುದು ಪೋಷಕರಲ್ಲಿ ತೀವ್ರ ಆಘಾತ ಮತ್ತು ಆತಂಕ ಮೂಡಿಸಿದೆ.

Edited By : Nagaraj Tulugeri
PublicNext

PublicNext

03/02/2026 10:01 pm

Cinque Terre

4.58 K

Cinque Terre

0

ಸಂಬಂಧಿತ ಸುದ್ದಿ