ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ಬಾಲಕರಿಂದ ನೈತಿಕ ಪೊಲೀಸ್‌ಗಿರಿ - ಹಿಂದೂ ಯುವಕ, ಮುಸ್ಲಿಂ ಯುವತಿಗೆ ಚಾಕು ತೋರಿಸಿ ಬೆದರಿಕೆ

ಚಿಕ್ಕಬಳ್ಳಾಪುರ : ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದನ್ನು ಪ್ರಶ್ನಿಸಿದ ಅನ್ಯ ಕೋಮಿನ ಬಾಲಕರಿಬ್ಬರು ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಈ ಘಟನೆ ನಡೆದಿದೆ.

ರಾಜ್ಯದಲ್ಲಿ ಅಲ್ಲಲ್ಲಿ ನೈತಿಕ ಪೊಲೀಸ್‌ಗಿರಿಯ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ನಗರದಲ್ಲಿಯೂ ಅಂತಹದ್ದೇ ಆತಂಕಕಾರಿ ಘಟನೆಯೊಂದು ನಡೆದಿದೆ. ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳಾಗಿರುವ ಯುವಕ ಮತ್ತು ಯುವತಿ, ಒಂದೇ ಊರಿನವರು ಹಾಗೂ ಸ್ನೇಹಿತರಾಗಿದ್ದಾರೆ. ಇವರಿಬ್ಬರು ಕಾಲೇಜು ಬಸ್ ಇಳಿದು ಬಸ್‌ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಇವರನ್ನು ಹಿಂಬಾಲಿಸಿದ ಇಬ್ಬರು ಬಾಲಕರು, 'ನೀವು ಬೇರೆ ಬೇರೆ ಧರ್ಮದವರು, ಯಾಕೆ ಜೊತೆಯಲ್ಲಿ ಓಡಾಡುತ್ತಿದ್ದೀರಿ?' ಎಂದು ಪ್ರಶ್ನಿಸಿ ತಗಾದೆ ತೆಗೆದಿದ್ದಾರೆ.

ಕೇವಲ ಪ್ರಶ್ನೆ ಮಾಡಿದ್ದಷ್ಟೇ ಅಲ್ಲದೆ, ಪುಂಡರು ತಮ್ಮ ಮೊಬೈಲ್‌ ಫೋನ್‌ನಲ್ಲಿ ವಿದ್ಯಾರ್ಥಿಗಳ ವಿಡಿಯೋ ಮಾಡಲು ಪ್ರಾರಂಭಿಸಿದ್ದಾರೆ. 'ನಮ್ಮ ಕೋಮಿನ ಹುಡುಗಿ ಜೊತೆ ನೀನ್ಯಾಕೆ ಬರುತ್ತಿದ್ದೀಯಾ?' ಎಂದು ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ವಿಡಿಯೋ ಮಾಡಲು ಮುಂದಾಗಿದ್ದಾರೆ. ತಮ್ಮಿಬ್ಬರ ವಿಡಿಯೋ ಮಾಡಬೇಡಿ, ಅದನ್ನು ಡಿಲೀಟ್ ಮಾಡಿ ಎಂದು ಯುವಕ ಮತ್ತು ಯುವತಿ ಮನವಿ ಮಾಡಿಕೊಂಡಿದ್ದಾರೆ. ವಿಡಿಯೋ ಡಿಲೀಟ್ ಮಾಡುವಂತೆ ಕೇಳಿದ್ದಕ್ಕೆ ರೊಚ್ಚಿಗೆದ್ದ ಬಾಲಕರು, ತಮ್ಮ ಬಳಿಯಿದ್ದ ಚಾಕುವನ್ನು ತೋರಿಸಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿಯೇ ನಡೆದ ಈ ಘಟನೆ ವಿದ್ಯಾರ್ಥಿಗಳಲ್ಲಿ ಭಾರಿ ಭಯ ಹುಟ್ಟಿಸಿದೆ.

ಘಟನೆಗೆ ಸಂಬಂಧಿಸಿದಂತೆ ಮಾಹಿತಿ ತಿಳಿದ ತಕ್ಷಣ ಎಚ್ಚೆತ್ತುಕೊಂಡ ಚಿಕ್ಕಬಳ್ಳಾಪುರ ನಗರ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಕೃತ್ಯ ಎಸಗಿದ ಇಬ್ಬರು ಬಾಲಕರನ್ನು ವಶಕ್ಕೆ ಪಡೆದ್ದಾರೆ. ಅವರು ಅಪ್ರಾಪ್ತರಾಗಿರುವುದರಿಂದ ಬಾಲ ನ್ಯಾಯ ಕಾಯ್ದೆಯಡಿ ಮುಂದಿನ ಕ್ರಮ ಜರುಗಿಸಲಾಗುತ್ತಿದೆ.

ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ

Edited By : Manjunath H D
PublicNext

PublicNext

04/02/2026 08:00 am

Cinque Terre

6.41 K

Cinque Terre

0

ಸಂಬಂಧಿತ ಸುದ್ದಿ